Belagavi News In Kannada | News Belgaum

ಬೆಳಗಾವಿ ಪಾಲಿಕೆ ಚುನಾವಣೆಯಲ್ಲೇನು ಮ್ಯಾಜಿಕ್ ಆಗಿಲ್ಲ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

🌐 Belgaum News :

ಹುಕ್ಕೇರಿ : ‘ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್  ಮುಖಂಡರಲ್ಲಿನ ಗೊಂದಲ, ಮಹಾರಾಷ್ಟ್ರ ಏಕೀಕರಣ ಸಮಿತಿಯ ಅತೀಯಾದ ಆತ್ಮವಿಶ್ವಾಸವೇ ಬಿಜೆಪಿಗೆ ಲಾಭವಾಗಿದೆ ‘ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಸತೀಶ್ ಜಾರಕಿಹೊಳಿ ಹೇಳಿದರು.

ಹುಕ್ಕೇರಿ ತಾಲ್ಲೂಕು ಪಂಚಾಯ್ತಿ ಸಂಭಾಗಣದಲ್ಲಿ ನಡೆದ  ಕೆಡಿಪಿ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ‘ ಪಾಲಿಕೆ ಚುನಾವಣೆಯಲ್ಲಿ ಏನು ಮ್ಯಾಜಿಕ್ ಆಗಿಲ್ಲ. ಕಾಂಗ್ರೆಸ್ ಪಕ್ಷದಲ್ಲಿನ ಹಲವರು ಅಭ್ಯರ್ಥಿಗಳನ್ನು ಸೋಲಿಸಲು ಪ್ರಯತ್ನ ಮಾಡಿದರು. ಅಲ್ಲದೆ ಎಂಇಎಸ್ ಅತೀಯಾದ ಆತ್ಮವಿಶ್ವಾಸ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲಲು ಸಾಧ್ಯವಾಗಿದೆ’  ಎಂದರು.

‘ ಕೆಡಿಪಿ ಸಭೆ ಕುರಿತು ಮಾತನಾಡಿ, ಪ್ರತಿ ಮೂರು ತಿಂಗಳಿಗೆ ಒಮ್ಮೆ ನಡೆಸುವ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ಹೊಸ ಕಾಮಗಾರಿಗಳು ಹಾಗೂ ಹಲವಾರು ಸಮಸ್ಯೆಗಳನ್ನು ಇತ್ಯರ್ಥ ಮಾಡುವ ಪ್ರಯತ್ನ ಮಾಡಲಾಗಿದೆ’ ಎಂದು ತಿಳಿಸಿದರು.

‘ ತದನಂತರ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಅವರು, ಈ ವರ್ಷ ರೈತರಿಗೆ ಒಳ್ಳೆಯ ರೀತಿ ಮಳೆ, ಬೆಳೆ ಆಗಲಿ. ಕೊರೊನಾದಿಂದ ಪ್ರತಿಯೊಬ್ಬರು ಸಂಕಷ್ಟಕ್ಕೆ ಸಿಲುಕಿದ್ದಾರೆ.  ಜನರಿಗೆ ಆಗಿರುವ ಕಷ್ಟಗಳು ಸರಿದು ಸಂತೋಷದಿಂದ ಜೀವನ ನಡೆಸುವಂತಾಗಲಿ’ ಎಂದು ಹಾರೈಸಿದರು.

ಇನ್ನು ಕೇವಲ ಐದು ರೂಪಾಯಿ ಪೆಟ್ರೋಲ್, ಡಿಸೇಲ್ ಬೆಲೆ ಇಳಿಸಿ ದೀಪಾವಳಿ ಉಡುಗೊರೆ ಎಂದು ಮೋದಿ ಸರ್ಕಾರ ಹೇಳುತ್ತಿದೆ. ನೂರಾರು ರೂಪಾಯಿ ಹೆಚ್ಚಿಸಿ ಕೇವಲ ಐದು ರೂಪಾಯಿ ಇಳಿಸಿ ಪ್ರಚಾರ ಗಿಟ್ಟಿಸಿಕೊಳ್ಳಬಾರದು, ಮೊದಲು ಕಾಂಗ್ರೆಸ್ ಸರ್ಕಾರ ಇದ್ದಾಗ ಇದ್ದ ಬೆಲೆ ನೀಡಬೇಕು ಎಂದು ಆಗ್ರಹಿಸಿದರು.//////

📱 Read Top News, Belgaum News Updates, Belagavi News in Kannada, Latest News on News Belgaum