Belagavi News In Kannada | News Belgaum

ರಾಜ್ಯಾದ್ಯಂತ ಇನ್ನೂ ಮೂರು ದಿನ ವರುಣಾರ್ಭಟ

🌐 Belgaum News :

ಬೆಂಗಳೂರು:   ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿ, ಒಳನಾಡು ಭಾಗಗಳಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳಕೊಲ್ಲಿ ಮಧ್ಯಭಾಗದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕದಲ್ಲಿ ಒಣ ಹವೆ ಮುಂದುವರಿಯಲ್ಲಿದ್ದು, ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.
ತಡರಾತ್ರಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು,ಗಂಟೆಗೂ ಹೆಚ್ಚು ಕಾಲ ವಾಹನ ಸವಾರರು ಪರದಾಡುವಂತಾಯಿತು.

ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಮೈಸೂರು ಹಾಗೂ ರಾಮನಗರ ಭಾಗದಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ.

📱 Read Top News, Belgaum News Updates, Belagavi News in Kannada, Latest News on News Belgaum