Belagavi News In Kannada | News Belgaum

ತಮಿಳುನಾಡಿನ ರಾಜಕೀಯಕ್ಕೆ ಮಣಿಯದೇ ಶೀಘ್ರವೇ ಮೇಕೆದಾಟು ಯೋಜನೆ ಆರಂಭಿಸಿ: ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಒತ್ತಾಯ

🌐 Belgaum News :

ಮೈಸೂರು:  ಮೇಕೆದಾಟು ಯೋಜನೆಗೆ  ತಮಿಳುನಾಡಿನವರು ಕ್ಯಾತೆ ತೆಗೆದಿರುವ ವಿಷಯ ಗೊತ್ತು, ಅವರ ರಾಜಕೀಯಕ್ಕೆ ಮಣಿಯದೇ  ಕೇಂದ್ರದಿಂದ ಒಪ್ಪಿಗೆ ಪಡೆದು ತುರ್ತಾಗಿ ಮೇಕೆದಾಟು ಯೋಜನೆ ಆರಂಭಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯನವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮಂಗಳವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಮಿಳುನಾಡಿನವರು ರಾಜಕೀಯಕ್ಕೆ ರಾಜ್ಯ ಸರ್ಕಾರ ಮಣಿಯಬಾರದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಹಿಂದೆ ನೀರಾವರಿ ಸಚಿವರಾಗಿ ಕೆಲಸ ಮಾಡಿದ್ದಾರೆ. ಅವರಿಗೆ ಯೋಜನೆಯ ಬಗ್ಗೆ ಸಂಪೂರ್ಣವಾಗಿ ಗೊತ್ತಿದೆ. ಕಾಮಗಾರಿ ಪ್ರಾರಂಭಿಸುವುದಕ್ಕೆ ಕೋರ್ಟ್ ಆದೇಶ ಕೂಡ ಕ್ಲಿಯರ್ ಆಗಿದೆ. ಹಾಗಾಗಿ ತಮಿಳುನಾಡಿನವರು ರಾಜಕೀಯವಾಗಿ ಕ್ಯಾತೆ ಮಾಡುತ್ತಿರುವ ಬಗ್ಗೆ ತಲೆ ಕೆಡಿಸಿಕೊಳ್ಳದೆ ಮೇಕೆದಾಟು ಯೋಜನೆಯ ಕಾಮಗಾರಿಯನ್ನು ತಕ್ಷಣವೇ ಪ್ರಾರಂಭಿಸಬೇಕು ಎಂದು ಆಗ್ರಹಿಸಿದರು.

ನಮ್ಮ ಸರ್ಕಾರದ ಅವಧಿಯಲ್ಲಿ ಮೇಕೆದಾಟು ಯೋಜನೆಗೆ ಡಿಪಿಆರ್ ಮಾಡುವುದು ತಡವಾಗಿತ್ತು. ಆದರು ನಾವು ಡಿಪಿಆರ್ ಮಾಡಿ ಮುಗಿಸಿದ್ದೇವೆ. ಈಗ ಇವರು ಕಾಮಗಾರಿ ಆರಂಭಿಸಲು ಬಿಜೆಪಿ ಸರ್ಕಾರದವರು ವಿಳಂಬ ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರ ಬಂದು ಎರಡು ಕಾಲು ವರ್ಷ ಆಯ್ತು. ಏನು ಕೆಲಸಗಳು ಆಗ್ತಿಲ್ಲ ಎಂದು ಆರೋಪಿಸಿದರು.
ಕಾಂಗ್ರೆಸ್ ನವರು ತಡವಾಗಿ ಮೇಕೆದಾಟು ಯೋಜನೆಗೆ ಡಿಪಿಆರ್ ಮಾಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ನೀಡಿರುವ ಹೇಳಿಕೆಯಲ್ಲಿ ಅರ್ಥ ಇಲ್ಲ.

ಬಿಟ್ ಕಾಯಿನ್ ತನಿಖೆ  ನಡೆಯಲಿ

ಬಿಟ್ ಕಾಯಿನ್ ವಿಚಾರದಲ್ಲಿ ಆಡಳಿತ ಪಕ್ಷ ಅಥವಾ ವಿರೋಧ ಪಕ್ಷದವರು ಯಾರೇ ಇರಲಿ. ಮೊದಲು ತನಿಖೆ ಆರಂಭಿಸಿ. ಪ್ರಕರಣ ಕುರಿತು ಚುರುಕಾಗಿ ಯಾಕೆ ತನಿಖೆ ಆರಂಭಿಸುತ್ತಿಲ್ಲ. ನನ್ನ ಬಳಿಯೇ ಸರ್ಕಾರ ಸಾಕ್ಷಿ ಕೇಳುತ್ತಿದೆ. ಅದರ ಸಾಕ್ಷಿ ಹುಡುಕಬೇಕಾದವರು, ತನಿಖೆ ಮಾಡಬೇಕಾದವರು ತನಿಖಾಧಿಕಾರಿಗಳು. ಆ ಕೆಲಸವನ್ನು ಸರ್ಕಾರ ಮಾಡಿಸಲಿ. ನನ್ನ ಬಳಿ ಇರುವ ಮಾಹಿತಿಯನ್ನು ಅಗತ್ಯವಿದ್ದರೆ ಕೋರ್ಟ್ಗೆ ಕೊಡುತ್ತೇವೆ.

ಈ ಬಾರಿಯ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ನಡೆಸಲು ಇನ್ನು ಸಾಕ್ಷಿಗಳು ಬೇಕಿವೆ. ನಾನು ಸಾಕ್ಷಿಗಳ ಸಂಗ್ರಹದಲ್ಲಿ ಇದ್ದೇನೆ. ನಾನು ನನ್ನ ಬಳಿ ಇರುವ ವಿಚಾರವನ್ನ ಹಂಚಿಕೊಳ್ಳುತ್ತಿದ್ದೇನೆ ಅಷ್ಟೇ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು./////

📱 Read Top News, Belgaum News Updates, Belagavi News in Kannada, Latest News on News Belgaum