Belagavi News In Kannada | News Belgaum

ಬೆಳಗಾವಿ ತಾಲೂಕಿನ ವಿವಿಧ ಗ್ರಾಮಗಳಿಗೆ ಸಮರ್ಪಕ ಬಸ್ ಸೌಲಭ್ಯ ಒದಗಿಸಲು ಆಗ್ರಹ

🌐 Belgaum News :

ಬೆಳಗಾವಿ: ಮನ್ನಿಕೇರಿ, ಜಾಪರವಾಡಿ, ಕಡೋಲಿ, ಕೇದನೂರ, ಅಲತಗಾ ಸೇರಿ ಬೆಳಗಾವಿ ತಾಲೂಕಿನ ವಿವಿಧ ಗ್ರಾಮಗಳಿಗೆ ಸಮರ್ಪಕವಾಗಿ ಬಸ್ ಸೌಲಭ್ಯ ಒದಗಿಸುವಂತೆ ಮಂಗಳವಾರ ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ವಿದ್ಯಾರ್ಥಿಗಳು ಆಗ್ರಹಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಯವರ ಆದೇಶದ ಮೇರೆಗೆ ಅವರ ಆಪ್ತ ಸಹಾಯಕ ಮಲ್ಲಗೌಡ ಪಾಟೀಲ ನೇತೃತ್ವದಲ್ಲಿ ಬೆಳಗಾವಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ನಂತರ ಮಾತನಾಡಿದ ಮುಖಂಡ ಮಲ್ಲಗೌಡ ಪಾಟೀಲ, ಮನ್ನಿಕೇರಿ, ಅಲತಗಾ ಸೇರಿ ತಾಲೂಕಿನ ವಿವಿಧ ಗ್ರಾಮಗಳಿಗೆ ಬೆಳಗಾವಿ ನಗರದಿಂದ ಸಮರ್ಪಕವಾಗಿ ಬಸ್ ಸೌಲಭ್ಯವಿಲ್ಲ. ಇದರಿಂದ ಶಾಲಾ, ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಕೆಲವೇ ಕೆಲವು ಬಸ್ ಗಳು ಇರುವುದರಿಂದ ವಿದ್ಯಾರ್ಥಿಗಳು ಗಂಟೆಗಟ್ಟಲೆ ಕಾಯಬೇಕಾಗುತ್ತಿದೆ. ಹೀಗಾಗಿ, ಸಮರ್ಪಕವಾಗಿ ಬಸ್ ಓಡಿಸುವಂತೆ ಮನವಿ ಸಲ್ಲಿಸಲಾಗಿದೆ.

ನಮ್ಮ ಮನವಿಗೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಸ್ಪಂದಿಸಿದ್ದು, ಎರಡು ದಿನಗಳಲ್ಲಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದ್ದಾರೆ. ಎರಡ್ಮೂರು ದಿನಗಳಲ್ಲಿ ಅವರು ಕ್ರಮಕೈಗೊಳ್ಳದಿದ್ದರೇ ಮುಂದೆ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಮುಖಂಡರು ಹಾಗೂ ವಿವಿಧ ಗ್ರಾಮಗಳ ವಿದ್ಯಾರ್ಥಿಗಳು ಹಾಜರಿದ್ದರು. /////

📱 Read Top News, Belgaum News Updates, Belagavi News in Kannada, Latest News on News Belgaum