Belagavi News In Kannada | News Belgaum

ಮಣ್ಣಿಕೇರಿಯಲ್ಲಿ ಯುವಕರಿಗಾಗಿ ರನ್ನಿಂಗ್ ಟ್ರ್ಯಾಕ್ ನಿರ್ಮಾಣದ ಭರವಸೆ : ಸ್ಥಳ ಪರಿಶೀಲನೆ

🌐 Belgaum News :

ಬೆಳಗಾವಿ : ಮಣ್ಣಿಕೇರಿ ಗ್ರಾಮದ ಯುವಕರು, ವಿದ್ಯಾರ್ಥಿಗಳು ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ರನ್ನಿಂಗ್ ಟ್ರ್ಯಾಕ್ ಮಾಡಿಕೊಡುವಂತೆ ಮನವಿ ಮಾಡಿದ ಹಿನ್ನಲೆ ಶಾಸಕರ ಸೂಚನೆಯ ಮೇರೆಗೆ ಆಪ್ತ ಸಹಾಯಕ ಮಲ್ಲಗೌಡಾ ಪಾಟೀಲ ಅವರು ಇಂದು ಭೇಟಿ ನೀಡಿ, ಸ್ಥಳ ಪರಿಶೀಲಿಸಿದರು.

ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ದಿನನಿತ್ಯ ರನ್ನಿಂಗ್ ಮಾಡಲು ವ್ಯವಸ್ಥಿತವಾದ ಟ್ರ್ಯಾಕ್ ನಿರ್ಮಾಣಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ಅವರಲ್ಲಿ ಮನವಿ ಮಾಡಿಕೊಂಡಿದ್ದರು. ಇದರಿಂದ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ರನ್ನಿಂಗ್ ಟ್ಯಾಕ್ ನಿರ್ಮಾಣ ಮಾಡಲಾಗುತ್ತಿದೆ ಎಂದರು.

ಶಾಸಕರಾದ ಸತೀಶ್ ಜಾರಕಿಹೊಳಿಯವರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಕ್ರೀಡೆ  ಪ್ರೋತ್ಸಾಹಕ್ಕೆ ಪ್ರತಿವರ್ಷ 1 ಕೋಟಿ ಅನುದಾನ ಮೀಸಲಿಡುವುದಾಗಿ ಘೋಷಣೆ ಮಾಡಿದ್ದರು. ಅದೇ ರೀತಿ ಕ್ರೀಡೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ, ವಿದ್ಯಾರ್ಥಿಗಳ ಬೇಡಿಕೆ ಸ್ಪಂಧಿಸಿದ್ದಾರೆ ಎಂದು ತಿಳಿಸಿದರು.

ಗ್ರಾಮೀಣ ವಿದ್ಯಾರ್ಥಿಗಳ ಬೇಡಿಕೆಗೆ ಸ್ಪಂಧಿಸಿ, ಸ್ಥಳ ಪರಿಶೀಲನೆ ನಡೆಸುವ ಮೂಲಕ ಎರಡು ದಿನಗಳಲ್ಲಿ ಕೆಲಸ ಆರಂಭಿಸಿ ರನ್ನಿಂಗ್ ಟ್ರ್ಯಾಕ್ ನಿರ್ಮಾಣ ಮಾಡಿಕೊಡಲಾವುದು ಎಂದು ಭರವಸೆ ನೀಡಿದ ಹಿನ್ನೆಲೆ ಗ್ರಾಮಸ್ಥರು ಹರ್ಷ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು, ವಿದ್ಯಾರ್ಥಿಗಳ ಇದ್ದರು.//////

📱 Read Top News, Belgaum News Updates, Belagavi News in Kannada, Latest News on News Belgaum