Belagavi News In Kannada | News Belgaum

ಪಾಲಕರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಚಿಕ್ಕಮಕ್ಕಳ ಬಗ್ಗೆ ಹೆಚ್ಚಿನ ಗಮನ ಹರಿಸಿ : ಶ್ರೀನಿವಾಸ ಶ್ರೀಮಂತ ಪಾಟೀಲ

🌐 Belgaum News :

ಶೇಡಬಾಳ : ಪಾಲಕರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಚಿಕ್ಕಮಕ್ಕಳ ಬಗ್ಗೆ ಹೆಚ್ಚಿನ ಗಮನ ಹರಿಸಿ ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಕಾಗವಾಡ ಮತಕ್ಷೇತ್ರದ ಯುವ ನಾಯಕರಾದ ಶ್ರೀನಿವಾಸ ಶ್ರೀಮಂತ ಪಾಟೀಲ ಹೇಳಿದರು.
ಸೋಮವಾರ ದಿ. 8 ರಂದು ಅಂಗನವಾಡಿ ಕೇಂದ್ರಗಳ ಪ್ರಾರಂಭೋತ್ಸವ ಕಾರ್ಯಕ್ರಮದ ಅಂಗವಾಗಿ ಕಾಗವಾಡ ತಾಲೂಕಿನ ಮೋಳವಾಡ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿಯ ವ್ಯವಸ್ಥೆಯನ್ನು ಪರಿಶೀಲಿಸಿ, ಪುಟ್ಟಮಕ್ಕಳಿಗೆ ಚಾಕ್ಲೆಟ್ ಹಾಗೂ ಸಿಹಿಯನ್ನು ನೀಡಿ ಶುಭ ಹಾರೈಸಿ ಮಾತನಾಡಿದರು.
ಈ ಸಮಯದಲ್ಲಿ ಅಮಿತ ಪಾಟೀಲ, ವಿಜಯ ಖನ್ನಿಕುಡೆ, ಅಶೋಕ ನಾಂದಣಿ, ಚಿದಾನಂದ ಅಥಣಿ, ಭಾಸ್ಕರ ಹಾಲ್ಯಾಳ, ರಾಜು ದುಗ್ಗೆ ಸೇರಿದಂತೆ ಮತ್ತಿತರ ಮುಖಂಡರು, ಅಂಗನವಾಡಿ ಕಾರ್ಯಕರ್ತೆಯರು ಪುಟ್ಟ ಮಕ್ಕಳು ಉಪಸ್ಥಿತರಿದ್ದರು./////

📱 Read Top News, Belgaum News Updates, Belagavi News in Kannada, Latest News on News Belgaum