Belagavi News In Kannada | News Belgaum

ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಭೌದ್ಧ, ಸಿಖ್, ಪಾರ್ಸಿ ವಿದ್ಯಾರ್ಥಿಗಳಿಗೆ : ಅರ್ಜಿ ಆಹ್ವಾನ

🌐 Belgaum News :

ಬೆಳಗಾವಿ, ನ.10: 2021-22 ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಭೌದ್ಧ, ಸಿಖ್, ಪಾರ್ಸಿ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ವೆಬ್ ಸೈಟ್ : hಣಣಠಿ://ಜಿoಡಿms.gಟe/56W97Wv9zಘಿಖಣಛಿoಓsಏ8 ಈ ಲಿಂಕಿನಡಿ ಅರ್ಜಿ ಭರ್ತಿ ಮಾಡಿ ಸೂಚಿಸಲಾದ ದಾಖಲಾತಿಗಳೊಂದಿಗೆ ನ.30 ರೊಳಗಾಗಿ ಸಂಬಂಧಪಟ್ಟ ತಾಲೂಕ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.

 

ಸದರಿ ಅಭ್ಯರ್ಥಿಗಳು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿದ್ದು ವಿದ್ಯಾರ್ಥಿಗಳ (ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ಧ, ಸಿಖ್, ಪಾರ್ಸಿ) ಪೆÇೀಷಕರ ಆದಾಯ ರೂ.2.00 ಲಕ್ಷಕ್ಕಿಂತ ಕಡಿಮೆ ಇರಬೇಕು ಹಾಗೂ ಪ್ರವರ್ಗ-1 ಮತ್ತು ಕ್ರೈಸ್ತ ಸಮೂದಾಯಕ್ಕೆ ಪರಿವರ್ತನೆಯಾಗಿರುವ ವಿದ್ಯಾರ್ಥಿಗಳ ಪೆÇೀಷಕರ ವಾರ್ಷಿಕ ಆದಾಯ ರೂ.2.50 ಲಕ್ಷಕ್ಕಿಂತ ಕಡಿಮೆ ಇರಬೇಕು.

ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶವಾಗಿರಬೇಕು ಹಾಗೂ ವ್ಯಾಸಂಗ ಮಾಡುತ್ತಿರುವ ಕಾಲೇಜಿನಿಂದ 5 ಕಿ.ಮೀ ದೂರವಿರಬೇಕು. ಆದರೆ ವಿದ್ಯಾರ್ಥಿಯ ಸ್ವಂತ ಸ್ಥಳ ನಗರ / ಪಟ್ಟಣ ಪ್ರದೇಶಗಳಲ್ಲಿ ವಾಸವಾಗಿದ್ದು, ಅವರು ಬೇರೆ ನಗರ/ಪಟ್ಟಣ ಪ್ರದೇಶಗಳ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ, ಅಂತಹವರು ಈ ಸೌಲಭ್ಯಕ್ಕೆ ಅರ್ಹರಿರುವುದಿಲ್ಲ. (ಒಂದೇ ನಗರದ ವ್ಯಾಪ್ತಿಯಲ್ಲಿ ವ್ಯಾಸಂಗ ಮಾಡುತ್ತಿರುವವರು ಅರ್ಹರಿರುವುದಿಲ್ಲ).

ಈಗಾಗಲೇ ಸರ್ಕಾರಿ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರವವರು ಅರ್ಹರಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ 0831-2950348, 8095878321, 963201240, 7406821143 ಸಂಪರ್ಕಿಸಬಹುದು ಎಂದು ಬೆಳಗಾವಿಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಡಾ.ಅಬ್ದುಲ್ ರಶೀದ್ ಎಂ. ಮಿರಜನ್ನವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 Read Top News, Belgaum News Updates, Belagavi News in Kannada, Latest News on News Belgaum