Belagavi News In Kannada | News Belgaum

ಮಳೆ ರೌದ್ರನರ್ತನಕ್ಕೆ ತಮಿಳುನಾಡು ತಲ್ಲಣ: ಹವಾಮಾನ ವೈಪರಿತ್ಯಕ್ಕೆ ಚೆನ್ನೈ ಸ್ಥಿತಿ ದಿಕ್ಕಾಪಾಲು: 8 ವಿಮಾನಗಳ ಹಾರಾಟ ರದ್ದು

🌐 Belgaum News :

ಚೆನ್ನೈ :  ಮಳೆ ರೌದ್ರನರ್ತನಕ್ಕೆ  ತಮಿಳುನಾಡು ತಲ್ಲಣಗೊಂಡಿದ್ದು. ಈ ಹಿನ್ನೆಲೆಯಲ್ಲಿ ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ಚೆನ್ನೈ ವಿಮಾನ ನಿಲ್ದಾಣದಿಂದ ಸಂಚರಿಸಬೇಕಾಗಿದ್ದ, ಎಂಟು ವಿಮಾನಗಳ ಹಾರಾಟವನ್ನು ರದ್ದುಗೊಳಿಸಿದೆ. ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಮಳೆ ಮುಂದುವರಿಯುವ ಸಾಧ್ಯತೆಯ ಹಿನ್ನೆಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಮುಂಜಾನೆಯಿಂದಲೇ ಹವಾಮಾನ ವೈಪರಿತ್ಯ ಉಂಟಾಗಿದ್ದು, ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಂಚಾರ ನಡೆಸಬೇಕಾಗಿದ್ದ ಮಧುರೈ, ಮುಂಬೈ, ತಿರುಚನಾಪಲ್ಲಿ, ಶಾರ್ಜಾ ಗೆ ನಿಗದಿಯಾಗಿದ್ದ ವಿಮಾನಗಳ ಹಾರಾಟವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ತಮಿಳುನಾಡು ರಾಜ್ಯದ ಚೆನ್ನೈ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ.

ತಮಿಳುನಾಡಿನ ತಿರುವಳ್ಳೂರ್, ಕಾಂಚೀಪುತಂ, ಚೆಂಗಲ್‌ ಪಟ್ಟು, ಕಾಂಜೀಪುರಂ, ಕೊಡಂಬಕ್ಕಂ, ಅಶೋಕ್ ನಗರಗಳಲ್ಲಿ ಭಾರೀ ಮಳೆಯಾಗಿದ್ದು, ಮಳೆಯ ಅಬ್ಬರಕ್ಕೆ 538ಕ್ಕೂ ಹೆಚ್ಚು ಗುಡಿಸಲುಗಳಿಗೆ ಹಾನಿಯಾಗಿದೆ. ರಾಜ್ಯದಲ್ಲಿ ಈವರೆಗೆ 12 ಮಂದಿ ಮೃತಪಟ್ಟಿದ್ದಾರೆ. ಚೆನ್ನೈನ ಐದು ತಂಡಗಳು ಸೇರಿದಂತೆ 13 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಮಿಳುನಾಡು ಮತ್ತು ಪುದುಚೇರಿಯಲ್ಲಿ ರಕ್ಷಣಾ ಕಾರ್ಯಾ ನಡೆಸುತ್ತಿವೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಮಳೆ ಮುಂದಿನ ಎರಡು ದಿನಗಳ ಕಾಲ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.//////

📱 Read Top News, Belgaum News Updates, Belagavi News in Kannada, Latest News on News Belgaum