Belagavi News In Kannada | News Belgaum

ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಿಎಂ ಮನವಿ

🌐 Belgaum News :

ಬೆಂಗಳೂರು : ಕರ್ನಾಟಕದಲ್ಲಿ ವಿಧಾನಪರಿಷತ್ ಚುನಾವಣೆಯ ಹಿನ್ನಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಚರ್ಚೆ ಆರಂಭವಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಕೂಡಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಬೇಕು ಎಂದು ಹೈಕಮಾಂಡ್​ಗೆ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ಈಚೆಗಷ್ಟೇ ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರನ್ನು ಭೇಟಿ ಮಾಡಿ ಮನವಿ ಮಾಡಿದರು. ಅಭ್ಯರ್ಥಿಯನ್ನು ಶೀಘ್ರ ಘೋಷಣೆ ಮಾಡಿದರೆ ಚುನಾವಣೆಗೆ ತಯಾರಿ ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಹೀಗಾಗಿ ಅಭ್ಯರ್ಥಿ ಘೋಷಣೆ ವಿಳಂಬ ಮಾಡಬೇಡಿ ಎಂದು ವಿನಂತಿಸಿದರು.

ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ನಡೆದಿರುವ ಚರ್ಚೆಯ ಬಗ್ಗೆಯೂ ನಡ್ಡಾ ಅವರಿಗೆ ಬೊಮ್ಮಾಯಿ ವಿವರಿಸಿದರು. ಇನ್ನೆರೆಡು ದಿನಗಳೊಳಗೆ ದೆಹಲಿಯಲ್ಲಿ ವರಿಷ್ಠರ ಸಭೆ ನಡೆಯಲಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳುವ ಸಾಧ್ಯತೆಯಿದೆ.////

📱 Read Top News, Belgaum News Updates, Belagavi News in Kannada, Latest News on News Belgaum