Belagavi News In Kannada | News Belgaum

ನಟಿ ಕಂಗನಾ ರನಾವತ್‌ ವಿರುದ್ಧ ನ್ಯಾಯಾಂಗ ತನಿಖೆಗೆ ಬಿಜೆಪಿ ನಾಯಕನ ಒತ್ತಾಯ

🌐 Belgaum News :

ಹೊಸದಿಲ್ಲಿ: ‘ಭಾರತಕ್ಕೆ 2014ರಲ್ಲಿ ನಿಜವಾದ ಸ್ವಾತಂತ್ರ್ಯ ಸಿಕ್ಕಿದೆ. 1947ರಲ್ಲಿ ಸಿಕ್ಕಿದ್ದು ಭಿಕ್ಷೆ’  ಎಂದು ಹೇಳಿಕೆ ನೀಡಿರುವ ಬಾಲಿವುಡ್‌ ನಟಿ ಕಂಗನಾ ರನಾವತ್‌ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ದೆಹಲಿ ಬಿಜೆಪಿ ನಾಯಕ ಪ್ರವೀಣ್ ಶಂಕರ್ ಕಪೂರ್, ಕಂಗನಾ ವಿರುದ್ಧ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದಾರೆ.

ಕಂಗನಾರ ಈ ಹೇಳಿಕೆಯು ‘ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಕ್ಕೆ ಮಾಡಿದ ಅವಮಾನ’ ಎಂದು ದೂರಿದ್ದಾರೆ.

‘ಸ್ವಾತಂತ್ರ್ಯ ಹೋರಾಟಗಾರರ ಮಗನಾಗಿ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದಿಂದ ಬಂದ ನನಗೆ, ಭಾರತಕ್ಕೆ 1947ರಲ್ಲಿ ಸಿಕ್ಕಿದ ಸ್ವಾತಂತ್ರ್ಯ ಭಿಕ್ಷೆ’ ಎಂದಿರುವ ಕಂಗನಾರ ಹೇಳಿಕೆಯು, ಸ್ವಾತಂತ್ರ್ಯದ ಅತಿದೊಡ್ಡ ದುರುಪಯೋಗ ಮತ್ತು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಕ್ಕೆ ಮಾಡಿದ ಅವಮಾನ. ಭಾರತದ ನ್ಯಾಯಾಂಗ ವ್ಯವಸ್ಥೆಯು ಇದನ್ನು ಗಮನಿಸಬೇಕು’ ಎಂದು ಕಪೂರ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಬಳಿಕ ಪಿಟಿಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ‘ಟ್ವೀಟ್ ಮಾಡಿರುವುದು ನನ್ನ ವೈಯಕ್ತಿಕ ಅಭಿಪ್ರಾಯ’ ಎಂದು ತಿಳಿಸಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗ ‘ಭಾರತಕ್ಕೆ 2014ರಲ್ಲಿ ನಿಜವಾದ ಸ್ವಾತಂತ್ರ್ಯ ಸಿಕ್ಕಿದೆ. ಆದರೆ, 1947ರಲ್ಲಿ ದೇಶಕ್ಕೆ ಸಿಕ್ಕಿದ್ದು ಭಿಕ್ಷೆ’ ಎಂದು ಹೇಳಿಕೆ ನೀಡಿದ್ದರು. ಈ ಕುರಿತು ಗುರುವಾರ ತಡರಾತ್ರಿ ಟ್ವೀಟ್‌ ಮಾಡಿದ್ದ ಕಾಂಗ್ರೆಸ್‌, ‘ಭಿಕ್ಷೆ ಬೇಡಿದವರಿಗೆ ಕ್ಷಮಾದಾನ ಸಿಕ್ಕಿದೆ. ಧೈರ್ಯದಿಂದ ಹೋರಾಡಿದ ವೀರರಿಗೆ ಸ್ವಾತಂತ್ರ್ಯ ದೊರೆತಿದೆ‘ ಎಂದು ತಿರುಗೇಟು ನೀಡಿತ್ತು.

ಕಂಗನಾ ವಿರುದ್ಧ ಕಿಡಿಕಾರಿದ್ದ ಬಿಜೆಪಿ ಸಂಸದ ವರುಣ್‌ ಗಾಂಧಿ, ‘ಇದು ದೇಶ ವಿರೋಧಿ ಕೃತ್ಯ ಮತ್ತು ಕಂಗನಾ ಅವರನ್ನು ದೇಶವಿರೋಧಿ’ ಎನ್ನಬಹುದು ಎಂದು ತಿಳಿಸಿದ್ದರು.//////

📱 Read Top News, Belgaum News Updates, Belagavi News in Kannada, Latest News on News Belgaum