Belagavi News In Kannada | News Belgaum

ಖಾಸಗಿ ಶಾಲೆ ಮಕ್ಕಳ ಪೋಷಕರಿಗೆ ಸರ್ಕಾರದಿಂದ ಗುಡ್ ನ್ಯೂಸ್ !

🌐 Belgaum News :

ಬೆಂಗಳೂರು : ಖಾಸಗಿ ಶಾಲೆ ಮಕ್ಕಳ ಶುಲ್ಕ ಪಾವತಿಸಿದ್ದ ಪೋಷಕರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ.

2020-21ನೇ ಸಾಲಿನಲ್ಲಿ ಖಾಸಗಿ ಶಾಲೆಗಳು ಪೂರ್ಣ ಶುಲ್ಕ ಪಡೆದಿದ್ದರೆ ಹೆಚ್ಚುವರಿ ಶುಲ್ಕವನ್ನು ವಾಪಸ್ ಮಾಡುವಂತೆ ರಾಜ್ಯ ಸರ್ಕಾರ ಖಾಸಗಿ ಶಾಲೆಗಳಿಗೆ ಆದೇಶ ನೀಡಿದೆ.

2020-21 ನೇ ಸಾಲಿನ ಶೇಕಡಾ 30 ರಷ್ಟು ಶುಲ್ಕ ಕಡಿತ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಕೆಲ ಖಾಸಗಿ ಶಾಲೆಗಳ ಒಕ್ಕೂಟ ಕೋರ್ಟ್ ಮೊರೆ ಹೋಗಿತ್ತು. ಸದ್ಯ ಹೈಕೋರ್ಟ್ ಈ ಬಗ್ಗೆ ತೀರ್ಪು ನೀಡಿದ್ದು, ಶುಲ್ಕ ಪರಿಷ್ಕರಿಸಿ ಬೋಧನಾ ಶುಲ್ಕದಲ್ಲಿ ಶೇಕಡಾ 15 ರಷ್ಟು ಪಡೆಯುವಂತೆ ಆದೇಶಿಸಿದೆ.

ಹೈಕೋರ್ಟ್ ಆದೇಶದಂತೆ ಶುಲ್ಕ ಪಡೆಯಲು ಸರ್ಕಾರದಿಂದ ಅಧಿಕೃತವಾಗಿ 2020-21 ನೇ ಸಾಲಿನ ಶುಲ್ಕ ಆದೇಶವನ್ನು ಪ್ರಕಟಿಸಲಾಗಿದ್ದು, ಹೆಚ್ಚುವರಿ ಶುಲ್ಕವನ್ನು ಖಾಸಗಿ ಶಾಲೆಗಳು ವಾಪಸ್ ನೀಡಬೇಕಿದೆ ಎಂದು ಹೇಳಲಾಗಿದೆ./////

📱 Read Top News, Belgaum News Updates, Belagavi News in Kannada, Latest News on News Belgaum