Belagavi News In Kannada | News Belgaum

ವೇದಿಕೆ ಮೇಲೆ ಪುನೀತ್ ಗೆ ಅವಮಾನ: ಕ್ಷಮೆ ಕೇಳಿದ ರಚಿತಾ ರಾಮ್

🌐 Belgaum News :

ಬೆಂಗಳೂರು : ರಚಿತಾ ರಾಮ್​, ರಾಣಾ ನಟನೆಯ ‘ಏಕ್​ ಲವ್​ ಯಾ’ ಚಿತ್ರತಂಡ ಎಡವಟ್ಟು ಮಾಡಿಕೊಂಡಿದೆ. ಈ ಸಿನಿಮಾದ ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ಪುನೀತ್​ ರಾಜ್​ಕುಮಾರ್​ ಅವರಿಗೆ ಅಗೌರವ ತೋರಿಸಲಾಗಿದೆ. ಇದು ಅಪ್ಪು ಅಭಿಮಾನಿಗಳ ಆಕ್ರೋಶಕ್ಕೆ ಕಾರಣ ಆಗಿದೆ.

ಅಪ್ಪು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಅಸಮಾಧಾನ ವ್ಯಕ್ತ ಪಡಿಸಿದ ಹಿನ್ನೆಲೆ ನಟಿ ರಚಿತಾ ರಾಮ್ ,‘ಆ ರೀತಿ ಘಟನೆ ಆಗಿದ್ದಕ್ಕೆ ಕ್ಷಮೆ ಕೇಳ್ತೀನಿ’ ಎಂದಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಈ ಘಟನೆ ಬಗ್ಗೆ ರಚಿತಾ ರಾಮ್​ ಸಮಜಾಯಿಷಿ ನೀಡಿದ್ದಾರೆ. ‘ನಿನ್ನೆಯ ಏಕ್​ ಲವ್​ ಯಾ ಸಿನಿಮಾದ ಸಾಂಗ್​ ಲಾಂಚ್​ ಕಾರ್ಯಕ್ರಮದಲ್ಲಿ ಶಾಂಪೇನ್​ಬಾಟಲ್​ ಓಪನ್​ ಮಾಡಿ ಹಾಡನ್ನು ಬಿಡುಗಡೆಗೊಳಿಸಿರುವ ಬಗ್ಗೆ ನಿಮ್ಮೆಲ್ಲರಿಗೆ ಅಸಮಾಧಾನ ಆಗಿದೆ. ಆ ಬಗ್ಗೆ ದಯವಿಟ್ಟು ಕ್ಷಮೆ ಇರಲಿ.

ನಾನೂ ಕೂಡ ಚಿತ್ರದ ಭಾಗವಾಗಿರುವುದರಿಂದ ಕ್ಷಮೆ ಕೇಳುತ್ತೇನೆ. ಅಪ್ಪು ಅವರಿಗೆ ಅವಮಾನ ಮಾಡುವ ಉದ್ದೇಶ, ಆಲೋಚನೆ ಯಾವ ಕನ್ನಡಿಗರಿಗೂ ಇರುವುದಿಲ್ಲ. ಆದಾಗಿಯೂ ಉದ್ದೇಶಪೂರ್ವಕವಲ್ಲದ ತಪ್ಪನ್ನು ಅಭಿಮಾನಿಗಳು ಮನ್ನಿಸುತ್ತಾರೆಂದು ನಂಬಿದ್ದೇನೆ’ ಎಂದು ರಚಿತಾ ಪೋಸ್ಟ್​ ಮಾಡಿದ್ದಾರೆ.//////

📱 Read Top News, Belgaum News Updates, Belagavi News in Kannada, Latest News on News Belgaum