Belagavi News In Kannada | News Belgaum

ತಪ್ಪು ಸಾಬೀತಾದರೆ ಪದ್ಮಶ್ರೀ ಹಿಂದಿರುಗಿಸುವೆ : ನಟಿ ಕಂಗನಾ

🌐 Belgaum News :

ಹೊಸದಿಲ್ಲಿ: ಸ್ವಾತಂತ್ರ್ಯದ ಕುರಿತು ತಾವು ನೀಡಿರುವ ಹೇಳಿಕೆಯನ್ನು ತಪ್ಪು ಎಂದು ಸಾಬೀತು ಮಾಡಿದರೆ ‘ಪದ್ಮಶ್ರೀ’ ಪ್ರಶಸ್ತಿ ವಾಪಸ್ ಮಾಡುವುದಾಗಿ ಬಾಲಿವುಡ್ ನಟಿ ಕಂಗನಾ ರನೌತ್ ಹೇಳಿದ್ದಾರೆ.

‘ದೇಶಕ್ಕೆ ಸ್ವಾತಂತ್ರ್ಯ ದೊರೆತದ್ದು 2014ರಲ್ಲಿ. 1947ರಲ್ಲಿ ಸಿಕ್ಕಿದ್ದು ಭಿಕ್ಷೆ‘ ಎಂದು ಕಂಗನಾ ಗುರುವಾರ ಹೇಳಿದ್ದರು. ಈ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ಕೇಂದ್ರ ಸರ್ಕಾರವು ನಟಿಗೆ ನೀಡಿರುವ ‘ಪದ್ಮಶ್ರೀ’ ವಾಪಸ್ ಪಡೆಯಬೇಕು ಎಂದು ಹಲವರು ಒತ್ತಾಯಿಸಿದ್ದಾರೆ.

ತಮ್ಮ ವಿರುದ್ಧದ ಟೀಕೆಗಳಿಗೆ ಇನ್‌ಸ್ಟಾಗ್ರಾಂ ಮೂಲಕ ತಿರುಗೇಟು ನೀಡಿರುವ ಕಂಗನಾ, ತಪ್ಪು ಸಾಬೀತಾದರೆ ಪದ್ಮಶ್ರೀ ಪ್ರಶಸ್ತಿ ವಾಪಸ್ ಮಾಡುವುದಾಗಿ ತಿಳಿಸಿದ್ದಾರೆ./////

📱 Read Top News, Belgaum News Updates, Belagavi News in Kannada, Latest News on News Belgaum