Belagavi News In Kannada | News Belgaum

ಮಕ್ಕಳಿಗೆ ಸಿಹಿ ಹಂಚುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯನ್ನು ಎಳೆದೊಯ್ದು ಕತ್ತು ಸೀಳಿ ಬರ್ಬರ ಕೊಲೆ

🌐 Belgaum News :

ತಿಪಟೂರು : ವ್ಯಕ್ತಿಯೋರ್ವ ಅಂಗನವಾಡಿ ಕಾರ್ಯಕರ್ತೆಯನ್ನು ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಭಾನುವಾರ ತಾಲ್ಲೂಕಿನ ಹಂದನಕೆರೆ ಹಾಲುಕುರಿಕೆ ಗ್ರಾಮದಲ್ಲಿ ನಡೆದಿದೆ.

ಅಂಗನವಾಇ ಸಹಾಯಕಿ ಆಗಿ ಕೆಲಸ ನಿರ್ವಹಿಸುತ್ತಿದ್ದ ಭಾರತಿ (30) ಹತ್ಯೆಗೀಡಾದ ಮಹಿಳೆ. ದಿವಾಕರ್  ಕೊಲೆ ಮಾಡಿದ ವ್ಯಕ್ತಿ.

ಅಂಗನವಾಡಿ ಕೇಂದ್ರದಲ್ಲಿ ಸುಮಾರು ವರ್ಷಗಳಿಂದ ಅಯಾ ಕೆಲಸ ಮಾಡಿಕೊಂಡಿದ್ದರು. ಇಂದು ಮಕ್ಕಳ ದಿನಾಚರಣೆ ಪ್ರಯುಕ್ತ ಮಕ್ಕಳಿಗೆ ಸಿಹಿ ಹಂಚುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ದಿವಾಕರ್ ಬಂದು ಅಂಗನವಾಡಿ ಕೇಂದ್ರದ ಹಿಂಭಾಗದಲ್ಲಿ ಎಳೆದುಕೊಂಡು ಹೋಗಿ ಕತ್ತು ಸೀಳಿ ಅಮಾನುಷವಾಗಿ ಕೊಲೆ ಮಾಡಿದ್ದಾನೆ.

ಕೊಲೆಗೆ ಕಾರಣವೇನು ಎಂಬುವುದು ತಿಳಿದು ಬಂದಿಲ್ಲ. ಈ ಘಟನೆಯಿಂದ ಗ್ರಾಮಸ್ಥರನ್ನು ಬೆಚ್ಚಿ ಬಿಳಿಸುವಂತೆ ಮಾಡಿದೆ. ಕೊಲೆ ಮಾಡಿದ ವ್ಯಕ್ತಿ ಮಹಿಳೆಯ ಪತಿಯ ಅಕ್ಕನ ಮಗ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ./////

📱 Read Top News, Belgaum News Updates, Belagavi News in Kannada, Latest News on News Belgaum