Belagavi News In Kannada | News Belgaum

ಲಾರಿ-ಕಾರಿನ ನಡುವೆ ಭೀಕರ ಅಪಘಾತ: ಆರು ಮಂದಿ ದುರ್ಮಣ

🌐 Belgaum News :

ಬಿಹಾರ:  ಲಾರಿ-ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು,  ಆರು ಮಂದಿ ಸ್ಥಳದಲ್ಲೆ ದುರ್ಮಣಕ್ಕೀಡಾಗಿರುವ ಘಟನೆ ಜಮುಯಿ ನಡೆದಿದೆ.  ನಾಲ್ವರು ಗಾಯಗೊಂಡಿದ್ದಾರೆ.

ಸಿಕಂದ್ರಾ-ಶೇಖ್​​ಪುರ ಮುಖ್ಯರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಎಸ್​ಯುವಿಯಲ್ಲಿದ್ದ ಆರು ಮಂದಿ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಇವರೆಲ್ಲ ಜಮುಯಿ ಖೈರಾದಿಂದ ಪಾಟ್ನಾಕ್ಕೆ  ಅಂತ್ಯಕ್ರಿಯೆಗಾಗಿ ತೆರಳಿದ್ದರು. ಅಲ್ಲಿಂದ ವಾಪಸ್‌ ಬರುವಾಗ ಈ ದುರ್ಘಟನೆ ನಡೆದಿದೆ.
ಗಾಯಗೊಂಡ ನಾಲ್ವರನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಮೃತರ ಮತ್ತು ಗಾಯಗೊಂಡವರ ಕುಟುಂಬಕ್ಕೆ ವಿಷಯ ತಿಳಿಸಲಾಗಿದ್ದು, ಅವರೆಲ್ಲ ಸ್ಥಳಕ್ಕೆ ಆಗಮಿಸಿದ್ದಾರೆ.  ಹಲ್ಸಿ ಪೊಲೀಸ್​ ಠಾಣೆಯಲ್ಲಿ ಈ ಘಟನೆ ಈ ಕುರಿತು ಪ್ರಕರಣ ದಾಖಲಾಗಿದೆ./////

📱 Read Top News, Belgaum News Updates, Belagavi News in Kannada, Latest News on News Belgaum