Belagavi News In Kannada | News Belgaum

ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಸ್ವಾಗತಾರ್ಹ : ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ

🌐 Belgaum News :

ಬೆಳಗಾವಿ :   ದಿ.ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕ್ರಮ ಸ್ವಾಗತಾರ್ಹ ಎಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

 

ಕನ್ನಡ ಚಲನಚಿತ್ರದ ಮೇರು ನಟ ಪುನೀತ್ ರಾಜಕುಮಾರ್ ಅವರ ಅಗಲಿಕೆಯಿಂದ ಇಡೀ ರಾಜ್ಯದ ಜನತೆ ದುಃಖದಲ್ಲಿ ಭಾಗಿಯಾಗಿದ್ದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಚಲನಚಿತ್ರ ಮಂಡಳಿಯಿಂದ ನಡೆಸಲಾಗುತ್ತಿರುವ ಪುನೀತ್ ನಮನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿರುವುದು ನಿಜಕ್ಕೂ ಅಭಿಮಾನದ ಸಂಗತಿ ಎಂದರು.

 

ಪುನೀತ್ ರಾಜಕುಮಾರ್ ನಮ್ಮೊಂದಿಗೆ ಇರದೆ ಇರಬಹುದು. ಅವರ ನೆನಪುಗಳು, ಪುನೀತ್ ಅವರು ಮಾಡಿರುವ ಸಮಾಜ ಸೇವೆ ಇಂದಿನ ಯುವ ಪೀಳಿಗೆಗೆ ಮಾದರಿಯಾಗಿದೆ. ಕರ್ನಾಟಕ ಸರಕಾರ ಪುನೀತ್ ರಾಜಕುಮಾರ ಅವರಿಗೆ ಪದ್ಮಶ್ರೀ ಪ್ರಶಸ್ತಿ ಕೊಡಿಸಲು ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಿ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಡುವಂತಾಗಲಿ ಎಂದು ಪ್ರಕಟಣೆಯಲ್ಲಿ ಸಲಹೆ ನೀಡಿದರು.

📱 Read Top News, Belgaum News Updates, Belagavi News in Kannada, Latest News on News Belgaum