Belagavi News In Kannada | News Belgaum

ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ಕೇಸ್ ದಾಖಲು

🌐 Belgaum News :

ಬೆಂಗಳೂರು : ಪೇಜಾವರ ಶ್ರೀವಿಶ್ವೇಶ್ವರ ತೀರ್ಥ ಸ್ವಾಮೀಜಿ ದಲಿತ ಕೇರಿ ಭೇಟಿಯ ಕುರಿತು ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಅವರ ಹೇಳಿಕೆಯ ವಿರುದ್ಧ ಬೆಂಗಳೂರಿನ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೃಷ್ಣರಾಜ್​ ಎಂಬವರು ಬೆಂಗಳೂರಿನ ಹನುಮಂತ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈಗಾಗಲೇ ಹಂಸಲೇಖ ಅವರ ಕ್ಷಮೇ ಕೇಳಿದ್ದಾರೆ. ಇದರ ನಡುವೆ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಹಂಸಲೇಖ ಅವರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ‌. ಸಾಮಾಜಿಕ ಸಾಮರಸ್ಯಕ್ಕಾಗಿ ಪೇಜಾವರ ಶ್ರೀಗಳು ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಲೇವಡಿ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.//////

📱 Read Top News, Belgaum News Updates, Belagavi News in Kannada, Latest News on News Belgaum