Belagavi News In Kannada | News Belgaum

ಎಲ್ಲ ಸಮುದಾಯದವರನ್ನು ಒಗ್ಗಟ್ಟಿನಿಂದ ಕರೆದೊಯ್ಯುವ ಪಕ್ಷ ಕಾಂಗ್ರೆಸ್: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

🌐 Belgaum News :

ಬೆಂಗಳೂರು: ಎಲ್ಲ ಸಮುದಾಯದವರನ್ನು ಒಗ್ಗಟ್ಟಿನಿಂದ ಕರೆದೊಯ್ಯುವ ಪಕ್ಷವೆಂದರೆ ಕಾಂಗ್ರೆಸ್ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ಇಲ್ಲಿನ ಅರಮನೆ ಮೈದಾನದಲ್ಲಿ ಇಂದು ಆಯೋಜಿಸಿದ್ದ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಅವರ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.

ಪಕ್ಷದ ಬೆಳವಣಿಗೆಯಲ್ಲಿ ಎಲ್ಲ ಸಮುದಾಯದವರ ಕೊಡುಗೆ ದೊಡ್ಡದಿದೆ. ಅದೇ ರೀತಿ ಪಕ್ಷದ ಏಳಿಗೆಯಲ್ಲಿ ಅಲ್ಪಸಂಖ್ಯಾತ ಸಮುದಾಯದವರ ಕೊಡುಗೆಯೂ ಅಪಾರವಾಗಿದೆ ಎಂದರು.

ನೂತನ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಅವರು ಇನ್ನು ಹೆಚ್ಚಿನ ರೀತಿಯಲ್ಲಿ ಪಕ್ಷ ಸಂಘಟನೆ ಮಾಡಲಿ. ಅವರಿಗೆ ನಾವು ಎಲ್ಲ ರೀತಿಯ ಸಹಕಾರ ನೀಡಲಿದ್ದೇವೆ ಎಂದು ಭರವಸೆ ನೀಡಿದರು.  ಅವರು ರಾಜ್ಯಾದ್ಯಂತ ಪ್ರವಾಸ ಮಾಡಿ, ಸಮುದಾಯದ ಜನರಿಗೆ ಇತಿಹಾಸವನ್ನು ತಿಳಿಸುವ ಕೆಲಸ ಮಾಡಲಿ ಎಂದು ಸಲಹೆ ನೀಡಿದರು.

ಕಾಂಗ್ರೆಸ್ ಹಿರಿಯ ನಾಯಕರಾದ ವೀರಪ್ಪ ಮೊಯ್ಲಿ, ಎಚ್.ಕೆ. ಪಾಟೀಲ ಸೇರಿದಂತೆ ಇನ್ನಿತರರು ಮಾತನಾಡಿದರು. ಶಾಸಕ ಎನ್.ಎ. ಹ್ಯಾರಿಸ್ ಅವರು ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು.

ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ದ್ರುವ್ ನಾರಾಯಣ, ಈಶ್ವರ್ ಖಂಡ್ರೆ, ರಾಮಲಿಂಗಾರೆಡ್ಡಿ ಸೇರಿ ಹಲವು ನಾಯಕರು, ಕಾಂಗ್ರೆಸ್ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು./////

📱 Read Top News, Belgaum News Updates, Belagavi News in Kannada, Latest News on News Belgaum