Belagavi News In Kannada | News Belgaum

ವಿಧಾನಪರಿಷತ್ ಚುನಾವಣಾ ಅಖಾಡಕ್ಕೆ ಲಖನ್ ಜಾರಕಿಹೊಳಿ : : ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ !

🌐 Belgaum News :

ಬೆಳಗಾವಿ : ಡಿ.10ರಂದು ನಡೆಯುವ ವಿಧಾನಪರಿಷತ್ ಚುನಾವಣೆ ಅಖಾಡಕ್ಕೆ ಲಖನ್ ಜಾರಕಿಹೊಳಿ ಇಳಿಯಲಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದು, ನ.23ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಈಗಾಗಲೇ ಒಂದು ಸುತ್ತು ಪ್ರಚಾರ ನಡೆಸಿರುವ ಲಖನ್ ಜಾರಕಿಹೊಳಿ ಬೆನ್ನಿಗೆ ರಮೇಶ್, ಬಾಲಚಂದ್ರ ಜಾರಕಿಹೊಳಿ ನಿಂತಿದ್ದಾರೆ. ಲಖನ್ ನನ್ನು ಗೆಲ್ಲಿಸಲು ಎಲ್ಲಾ ರೀತಿಯ ರಾಜಕೀಯ ರಣತಂತ್ರ ಹೆಣೆದಿರುವ ಸಹೋದರರು. ಗೋಕಾಕ್, ಮೂಡಲಗಿ, ಯಮಕನಮರಡಿ, ಸವದತ್ತಿ, ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದಲ್ಲಿ ಹೆಚ್ಚಿನ ಮತ ಪಡೆಯಲು ತಂತ್ರ ರೂಪಿಸಿದ್ದಾರೆ.

ಕಾಂಗ್ರೆಸ್, ಬಿಜೆಪಿ ತಮ್ಮ ಅಧಿಕೃತ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಆದರೆ ಕಾಂಗ್ರೆಸ್‌ನಿಂದ ಚನ್ನರಾಜ್ ಹಟ್ಟಿಹೊಳಿ ಹಾಗೂ ಬಿಜೆಪಿಯಿಂದ ಮಹಾಂತೇಶ ಕವಟಗಿಮಠ ಕಣಕ್ಕೆ ಇಳಿಯುವುದು ಬಹುತೇಕ ಖಚಿತವಾಗಿದೆ. ಜಾರಕಿಹೊಳಿ ಕುಟುಂಬದ ಸದಸ್ಯನ ಸ್ಪರ್ಧೆಯಿಂದ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರಲಿದ್ದು, ಇಬ್ಬರು ಆಕಾಂಕ್ಷಿಗಳಲ್ಲಿ ಗೊಂದಲ ಸೃಷ್ಟಿಯಾಗಿದೆ.

ಮೂರು ಜನ ಜಾರಕಿಹೊಳಿ ಸಹೋದರರು (ಸತೀಶ್, ರಮೇಶ್ ಮತ್ತು ಬಾಲಚಂದ್ರ) ಈಗಾಗಲೇ ವಿಧಾನಸಭೆ ಸದಸ್ಯರಾಗಿ ಅನೇಕ ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಈಗ ಮತ್ತೊಬ್ಬ ಸಹೋದರ ಪರಿಷತ್ ಮೂಲಕ ರಾಜಕೀಯ ಪ್ರವೇಶಕ್ಕೆ ತಾಲೀಮು ‌ಆರಂಭಿಸಿದ್ದಾರೆ./////

📱 Read Top News, Belgaum News Updates, Belagavi News in Kannada, Latest News on News Belgaum