Belagavi News In Kannada | News Belgaum

ಬಸ್ ಬ್ರೇಕ್ ಫೇಲ್ ಗೋಡೆಗೆ ಡಿಕ್ಕಿ: ತಪ್ಪಿದ ಭಾರಿ ಅನಾಹುತ

🌐 Belgaum News :

ಧಾರವಾಡ : ಮದುವೆ ದಿಬ್ಬಣಕ್ಕೆ ಹೊರಟಿದ್ದ ಬಸ್ ಬ್ರೇಕ್ ಫೇಲ್ ಆಗಿ ಬ್ರಿಡ್ಜ್ ಗೋಡೆಗೆ ಡಿಕ್ಕಿಯಾದ ಘಟನೆ ಧಾರವಾಡದ ನವಲೂರ ಕ್ರಾಸ್ ಬಳಿ ನಡೆದಿದೆ.

ಬ್ರೇಕ್ ಫೇಲ್ ಆದ ಹಿನ್ನೆಲೆ ಬಸ್ ನಿಯಂತ್ರಣ ಕಳೆದುಕೊಂಡಿದ್ದು, ಈ ವೇಳೆ ಚಾಲಕ ಬಸ್ ಅನ್ನು ಬ್ರಿಡ್ಜ್ ಗೆ ಡಿಕ್ಕಿ ಹೊಡೆಸಿ ನಿಲ್ಲಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಬಸ್​​ನಲ್ಲಿ 50ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಧಾರವಾಡ ಸಂಚಾರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ./////

📱 Read Top News, Belgaum News Updates, Belagavi News in Kannada, Latest News on News Belgaum