Belagavi News In Kannada | News Belgaum

ಕಮಲ ತೊರೆದು ಕೈ ಹಿಡಿದ ನಟಿ ಭಾವನಾ

🌐 Belgaum News :

ಬೆಂಗಳೂರು :  ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ್ದ ನಟಿ ಭಾವನಾ ಮರಳಿ ಮಾತೃ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಸರ್ಜೇವಾಲ, ಕಾಂಗ್ರೆಸ್‌ನ ಮಾಜಿ ಕಾರ್ಯಕರ್ತೆ ಹಾಗೂ ನಟಿ ಭಾವನಾ ರಾಮಣ್ಣ ಅವರು ನನ್ನನ್ನು ಭೇಟಿಯಾದರು. ಕರ್ನಾಟಕದಲ್ಲಿ ಕಾಂಗ್ರೆಸ್‌ ಸೇರಿ, ಪಕ್ಷಕ್ಕಾಗಿ ದುಡಿಯುವ ಸಂಕಲ್ಪವನ್ನು ಅವರು ಮಾಡಿದ್ದಾರೆ. ಪ್ರತಿಯೊಬ್ಬರ ಸೇರ್ಪಡೆಯೊಂದಿಗೆ ಕಾಂಗ್ರೆಸ್‌ ಪಕ್ಷವು ಪ್ರಾಬಲ್ಯ ಸಾಧಿಸಲಿದೆ ಎಂದು ನಾನು ಭಾವಿಸಿದ್ದೇನೆ. ಭಾವನಾ ಅವರಿಗೆ ಶುಭಾಶಯಗಳು ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ನಲ್ಲಿಯೇ ಇದ್ದ ಭಾವನಾ 2018ರ ಮೇ 10ರಂದು ಬಿಜೆಪಿ ಸೇರಿದ್ದರು. ಕಳೆದ ವಿಧಾನಸಭಾ ಚುನಾವಣೆ ವೇಳೆ ಭಾವನಾ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಇವರಿಗೆ ಟಿಕೆಟ್ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ನಿರಾಕರಿಸಿತ್ತು. ಕಾಂಗ್ರೆಸ್ ಮೇಲೆ ಮುನಿಸಿಕೊಂಡು ಸಭೆಯಿಂದ ಹೊರ ನಡೆದಿದ್ದರು./////

📱 Read Top News, Belgaum News Updates, Belagavi News in Kannada, Latest News on News Belgaum