Belagavi News In Kannada | News Belgaum

ನಟ ಸುಶಾಂತ್​ ಸಿಂಗ್ ಕುಟುಂಬಸ್ಥರ ಕಾರು ಭೀಕರ ಅಪಘಾತ; 6 ಮಂದಿ ಸಾವು, ನಾಲ್ವರ ಸ್ಥಿತಿಚಿಂತಾಜನಕ

🌐 Belgaum News :

ಬಿಹಾರ: ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​  ಕುಟುಂಬಸ್ಥರ  ಕಾರು  ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿ,  6 ಮಂದಿ ಮೃತಪಟ್ಟಿರುವ ದುರ್ಘಟನೆ ಮಂಗಳವಾರ ನಡೆದಿದೆ.

ಸಾವಿನ ಸೂತಕದಲ್ಲಿರುವ ಕುಟುಂಬಸ್ಥರಿಗೆ ಮತ್ತೊಂದು ಆಘಾತ ಎದುರಾಗಿದ್ದು, ಲಖಿಸರಾಯ್​ ಜಿಲ್ಲೆಗೆ ತೆರಳುವ ಸಂದರ್ಭದಲ್ಲಿ ಜವರಾಯ ಅಟ್ಟಹಾಸ ಮೇರೆದಿದ್ದಾನೆ

ಭೀಕರ ಅಪಘಾತದಲ್ಲಿ  ನಾಲ್ವರಿಗೆ  ಗಂಭೀರವಾಗಿ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಈ ಘಟನೆಯಿಂದ ಸುಶಾಂತ್​ ಅಭಿಮಾನಿಗಳಿಗೆ ತೀವ್ರ ಆಘಾತ ಆಗಿದೆ.

 

ಸುಶಾಂತ್​ ಕುಟುಂಬದ ಸದಸ್ಯರು ಸೇರಿ ಒಟ್ಟು 10 ಮಂದಿ ಪ್ರಯಾಣಿಸಿದ್ದ ಕಾರು ಮತ್ತು ಟ್ರಕ್​​ ನಡುವೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ 6 ಮಂದಿ ಮೃತಪಟ್ಟಿದ್ದಾರೆ.

ಸುಶಾಂತ್​ ಸಿಂಗ್​ ರಜಪೂತ್​ ಅವರ ಭಾವ ಒ.ಪಿ. ಸಿಂಗ್​ ಅವರ ಸಹೋದರಿ ನಿಧನರಾಗಿದ್ದರು. ಅವರ ಅಂತಿಮ ಸಂಸ್ಕಾರವನ್ನು ಮುಗಿಸಿದ ಬಳಿಕ ಕುಟುಂಬದವರೆಲ್ಲ ಪಾಟ್ನಾದಿಂದ ಹಿಂದಿರುಗುತ್ತಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿರುವುದು ವಿಷಾದನೀಯ. ‘ಟ್ರಕ್​ ಮತ್ತು ಕಾರಿನ ನಡುವೆ ಭೀಕರವಾಗಿ ಡಿಕ್ಕಿ ಆಗಿದೆ. ಗಾಯಾಳುಗಳ ಸ್ಥಿತಿ ಚಿಂತಾಜನಕ ಆಗಿದೆ’ ಎಂದು ಘಟನೆ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.

6 ಮಂದಿಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಲಖಿಸರಾಯ್​ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಬಾಲಮುಕುಂದ್​ ಸಿಂಗ್​ ಮತ್ತು ದಿಲ್​ ಖುಷ್​ ಸಿಂಗ್​ ಅವರನ್ನು ಪಾಟ್ನಾಗೆ ಕಳಿಸಿ ಹೆಚ್ಚುವರಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನಿಬ್ಬರಿಗೆ ಲಖಿಸರಾಯ್​ ಜಿಲ್ಲಾ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ. ಮೃತರನ್ನು ಬಾಬಿ ದೇವಿ, ಅನಿತಾ ದೇವಿ, ಲಾಲ್​ಜಿತ್​ ಸಿಂಗ್​, ಅಮಿತ್​ ಶೇಖರ್​, ರಾಮಚಂದ್ರ ಸಿಂಗ್​ ಹಾಗೂ ಚಾಲಕ ಪ್ರೀತಂ ಎಂದು ಗುರುತಿಸಲಾಗಿದೆ./////

📱 Read Top News, Belgaum News Updates, Belagavi News in Kannada, Latest News on News Belgaum