Belagavi News In Kannada | News Belgaum

ಕನ್ನಡ ತಾಯಿಯ ಸೇವೆ ಮಾಡಲು ಅವಕಾಶ ಕಲ್ಪಿಸಿ ಕೊಡಿ: ಕಸಾಪ ಅಭ್ಯರ್ಥಿ ಬಸವರಾಜ ಖಾನಪ್ಪನವರ

🌐 Belgaum News :

ಗೋಕಾಕ:  ವಿರೋಧಿಗಳ ಹಬ್ಬಿಸುತ್ತಿರುವ ಸುಳ್ಳು ಸುದ್ದಿಗಳಿಗೆ ಕಿವಿಗೊಡದೆ ಕಸಾಪ ಸದಸ್ಯರು ನನ್ನನ್ನು ಬೆಂಬಲಿಸಿ ಕನ್ನಡ ತಾಯಿಯ ಸೇವೆ ಮಾಡಲು ಅವಕಾಶ ಕಲ್ಪಿಸಬೇಕೆಂದು ಕಸಾಪ ಅಭ್ಯರ್ಥಿ ಬಸವರಾಜ ಖಾನಪ್ಪನವರ ವಿನಂತಿ ಮಾಡಿಕೊಂಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕನ್ನಡ ಪರ ಅಭ್ಯರ್ಥಿಯಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಬಯಸಿ ಚುನಾವಣೆಗೆ ಸ್ವರ್ಧಿಸಿದ್ದು, ಕಳೆದ ಒಂದು ತಿಂಗಳಿನಿಂದ ಜಿಲ್ಲೆಯಾದ್ಯಂತ ಪ್ರವಾಸ ಮಾಡಿ  ಕಸಾಪ ಮತದಾರರನ್ನು ಭೇಟಿಯಾಗಿ ಮತದಾನ ಮಾಡುವಂತೆ ಮನವಿ ಮಾಡಿಕೊಳ್ಳಲಾಗಿದೆ.

ಜಿಲ್ಲೆಯ ಮತದಾರರು, ಹಿರಿಯ ಸಾಹಿತಿಗಳ ,ಮಠಾಧೀಶರ  ಹಾಗೂ ರಾಜಕಾರಣಿಗಳ ಅಭೂತಪೂರ್ವ ಬೆಂಬಲ ದೊರತ್ತಿದೆ. ಇದನ್ನು ಸಹಿಸದ ಕೆಲ ವಿರೋಧಿಗಳು ನನ್ನ ವಿರುದ್ಧ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾಗಿದ್ದು,  ಜಿಲ್ಲೆಯ ಎಲ್ಲಾ ಕಸಾಪ ಮತದಾರರು ಇದಕ್ಕೆ ಕಿವಿಗೊಡದೆ ನನ್ನನ್ನು ಬೆಂಬಲಿಸಿ ಇದೇ ಭಾನುವಾರ ಜರಗುವ ಕಸಾಪ ಜಿಲ್ಲಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿ ನನಗೆ ತಮ್ಮ ಮತವನ್ನು ನೀಡಿ ಗೆಲ್ಲಿಸಿ ತರಬೇಕೆಂದು ವಿನಂತಿಸುತ್ತೇನೆ./////

📱 Read Top News, Belgaum News Updates, Belagavi News in Kannada, Latest News on News Belgaum