Belagavi News In Kannada | News Belgaum

ಗೃಹ ಸಚಿವ ಅರಗ ಜ್ಞಾನೇಂದ್ರ ಒಬ್ಬ ಹುಚ್ಚ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

🌐 Belgaum News :

ಬೆಂಗಳೂರು : ಗೃಹ ಸಚಿವ ಅರಗ ಜ್ಞಾನೇಂದ್ರ ಒಬ್ಬ ಹುಚ್ಚ. ಹಾಗಾಗಿ ಏನೇನೋ ಮಾತನಾಡುತ್ತಿದ್ದಾರೆ, ಅವರಿಗೆ ತುರ್ತು ಚಿಕಿತ್ಸೆ ಅಗತ್ಯವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ಮಾಡಿದ್ದಾರೆ.

ಬಿಟ್ ಕಾಯಿನ್ ಹ್ಯಾಕಿಂಗ್ ಆರೋಪಿ ಶ್ರೀಕಿಯನ್ನು ಬಳಸಿಕೊಂಡು ಯುವ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯಲ್ಲಿ ಅಕ್ರಮ ಎಸಗಿರುವ ಬಗ್ಗೆ ಕಾಂಗ್ರೆಸ್ ನಾಯಕರು ತಮಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ದೂರು ಬಂದರೆ ತನಿಖೆ ನಡೆಸುವುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿರುವ ಬಗ್ಗೆ ಮಾಧ್ಯಮದವರ ಪ್ರಸ್ತಾಪಕ್ಕೆ ಶಿವಕುಮಾರ್ ಅವರು ಹೀಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದರು.

ಬಿಟ್ ಕಾಯಿನ್ ಹಗರಣದ ಬಗ್ಗೆ ಪ್ರಧಾನಿ ಅವರಿಗೆ ಲಿಖಿತ ದೂರು ಹೋಗಿದೆ. ಇದು ಅಧಿಕೃತ ಪತ್ರ. ಅದರಲ್ಲಿ ಸಿಎಂ ಕುಟುಂಬದ ಸದಸ್ಯರು, ಹಲವು ಮಂತ್ರಿಗಳು, ಬಿಜೆಪಿ ರಾಜ್ಯಾಧ್ಯಕ್ಷರು, ಸಂಸತ್ ಸದಸ್ಯರು ಸೇರಿದಂತೆ ಹಲವರ ಹೆಸರುಗಳು ಇವೆ. ಅವರು ಹಗರಣದಲ್ಲಿ ಷಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿದೆ. ಗೃಹ ಸಚಿವರು ಮೊದಲು ಈ ದೂರಿನ ಬಗ್ಗೆ ಸುಮೊಟೋ ಕೇಸು ದಾಖಲಿಸಿ, ತನಿಖೆ ಮಾಡಿಸಲಿ. ಆಮೇಲೆ ಯೂತ್ ಕಾಂಗ್ರೆಸ್ ಬಗ್ಗೆ ಮಾತಾಡಲಿ ಎಂದು ಹೇಳಿದರು.

ಯುವ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ನಡೆದಾಗ ಶ್ರೀಕಿ ಜೈಲಿನಲ್ಲಿದ್ದನಲ್ಲಾ, ಅವನು ಹೇಗೆ ನಲಪಾಡ್ ಪರ ರಿಗ್ಗಿಂಗ್ ಗೆ (ನಕಲಿ ಮತದಾನ) ಸಹಾಯ ಮಾಡಲು ಸಾಧ್ಯ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು, ಅದಕ್ಕೆ ನಾನು ಹೇಳಿದ್ದು ಹೋಮ್ ಮಿನಿಸ್ಟರ್ ಒಬ್ಬ ಹುಚ್ಚ ಎಂದು. ಅವರಿಗೆ ಸಾಮಾನ್ಯ ಜ್ಞಾನವೇ ಇಲ್ಲ.  ನಾನು ಏನು ಮಾತನಾಡುತ್ತಿದ್ದೇನೆ ಎಂಬುದರ ಪರಿವೆಯೇ ಇಲ್ಲ. ಹೀಗಾಗಿ ಅವರನ್ನು ಮೊದಲು ನಿಮ್ಹಾನ್ಸ್ ಗೆ ದಾಖಲಿಸಿ ಚಿಕಿತ್ಸೆ ಕೊಡಿಸಬೇಕಿದೆ ಎಂದರು./////

📱 Read Top News, Belgaum News Updates, Belagavi News in Kannada, Latest News on News Belgaum