Belagavi News In Kannada | News Belgaum

ಪಕ್ಷದ ಅಭ್ಯರ್ಥಿಯ ಗೆಲುವಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

🌐 Belgaum News :

ಯಲಬುರ್ಗಾ: ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ಯಲಬುರ್ಗಾ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಇಂದು ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಎರಡ್ಮೂರು ದಿನಗಳಲ್ಲಿ ಅಧಿಕೃತವಾಗಿ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗುವುದು. ಯಾರೇ ಅಭ್ಯರ್ಥಿಯಾದರು ಕೂಡ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಹೇಳಿದರು.

ಮುಂಬರುವ ವಿಧಾನಸಭಾ ಚುನಾವಣೆಗೆ ಕಾರ್ಯಕರ್ತರು ಈಗಿನಿಂದಲೇ ಸಜ್ಜಾಗಬೇಕು. ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಸತೀಶ ಅವರನ್ನು ಸನ್ಮಾನಿಸಿದರು. ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸೆಲ್ಫೀ ತೆಗೆಸಿಕೊಳ್ಳಲು ಮುಗಿಬಿದ್ದರು.

ಮಾಜಿ ಸಚಿವರಾದ ಬಸವರಾಜ  ರಾಯರಡ್ಡಿ, ಶಿವರಾಜ ತಂಗಡಗಿ,  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಹನುಮಂತಗೌಡ ಸೇಂಡೂರ್, ಬಸವರಾಜ ಉಳ್ಳಾಗಡ್ಡಿ, ಚನ್ನಬಸಪ್ಪ ನಿಡಗುಂದಿ, ಮಾಲತಿ ನಾಯಕ್, ಹನುಮೇಶ ನಾಯಕ್, ರತ್ನಾಕರ್ ತಳವಾರ, ನಾರಾಯನಪ್ಪ, ಜಯಶ್ರೀ ಕಂದಕುರ್,   ಜಿ.ಪಂ. ಮಾಜಿ ಸದಸ್ಯರಾದ ಗಿರಿಜಾ ಸಂತಿ, ರಾಜು ನಾಯಕ್ ಸೇರಿ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು./////

📱 Read Top News, Belgaum News Updates, Belagavi News in Kannada, Latest News on News Belgaum