Belagavi News In Kannada | News Belgaum

ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ : ಶೀಘ್ರವೇ 1,142 ಪಿಎಸ್‌ಐ, 4,460 ಪೇದೆಗಳ ಭರ್ತಿಗೆ ಅರ್ಜಿ

🌐 Belgaum News :

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವಂತ 1142 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹಾಗೂ 4460 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವಂತ ಪೊಲೀಸ್ ಹುದ್ದೆಗಳ ಸಂಬಂಧ, ಹೈಕೋರ್ಟ್ ನಲ್ಲಿ ಸ್ವಯಂ ಪ್ರೇರಿತವಾಗಿ ದಾಖಲು ಮಾಡಿಕೊಂಡಿದ್ದಂತ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ವಿಚಾರಣೆ ನಡೆಸಲಾಯಿತು. ಈ ವೇಳೆ ಭರ್ತಿಗೆ 8 ತಿಂಗಳ ಕಾಲಾವಕಾಶವನ್ನು ಕೋರಿದ್ದಂತ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ನ್ಯಾಯಪೀಠವು, ಕಾಲಾವಕಾಶ ನೀಡಲು ಸಾಧ್ಯವಿಲ್ಲ ಎಂಬುದಾಗಿ ಹೇಳಿದೆ.

ಅಲ್ಲದೇ 1 ವಾರದಲ್ಲಿ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಸಂಬಂಧ ಪ್ರಮಾಣ ಪತ್ರ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿತು. ಅಂದಹಾಗೇ.. ಪೊಲೀಸ್ ಇಲಾಖೆಯಲ್ಲಿ ಹುದ್ದೆಗಳು ಖಾಲಿ ಇರೋ ಕಾರಣದಿಂದಾಗಿ ಸಮರ್ಪಕವಾಗಿ ಕಾನೂನು ಸುವ್ಯವಸ್ಥೆ ನಿರ್ವಹಣೆಯಾಗುತ್ತಿಲ್ಲ ಎಂಬುದಾಗಿ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ಪಿಐಎಲ್ ದಾಖಲು ಮಾಡಿಕೊಂಡಿತ್ತು.

ಇಂದು ಈ ಅರ್ಜಿಯ ವಿಚಾರಣೆ ನಡೆಸಿ, ಶೀಘ್ರವೇ 1,142 ಪಿಎಸ್‌ಐ ಹಾಗೂ 4,460 ಪಿಸಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವ ಕುರಿತಂತೆ ಪ್ರಮಾಣ ಪತ್ರ ಸಲ್ಲಿಸಲು ಸೂಚಿಸಿದೆ. ಇದರಿಂದಾಗಿ ಶೀಘ್ರವೇ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವಂತ ಪಿಎಸ್‌ಐ, ಪಿಸಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರ ಬೀಳಲಿದೆ.////

📱 Read Top News, Belgaum News Updates, Belagavi News in Kannada, Latest News on News Belgaum