Belagavi News In Kannada | News Belgaum

ಕೃಷಿ ತಿದ್ದುಪಡಿ ಕಾಯ್ದೆ ವಾಪಸ್: ಬೆಳಗಾವಿಯಲ್ಲಿ ರೈತರ ವಿಜಯೋತ್ಸವ

🌐 Belgaum News :

ರೈತ ವಿರೋಧಿ 3 ಕೃಷಿ ತಿದ್ದುಪಡಿಗಳನ್ನು ಕೇಂದ್ರ ಸರ್ಕಾರ ವಾಪಸ್ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಕುಂದಾನಗರಿ ಬೆಳಗಾವಿಯಲ್ಲಿ ರೈತರು ವಿಜಯೋತ್ಸವ ಆಚರಿಸಿದ್ದಾರೆ.

ಹೋರಾಟದ ಎಲ್ಲರಿಗೂ ರೈತರು ಇಂದು ಇಲ್ಲಿ ಅಭಿನಂದನೆ ಸಲ್ಲಿಸಿದರು

ಹೌದು ಇಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು 3 ಕೃಷಿ ತಿದ್ದುಪಡಿಗಳನ್ನು ವಾಪಸ್ ಪಡೆಯುವ ಬಗ್ಗೆ ಘೋಷಣೆ ಮಾಡುತ್ತಿದ್ದಂತೆ ದೇಶಾಧ್ಯಂತ ಅನ್ನದಾತರ ಸಂಭ್ರಮ ಮುಗಿಲು ಮುಟ್ಟಿದೆ. ಅದೇ ರೀತಿ ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ರೈತರು ವಿಜಯೋತ್ಸವ ಆಚರಿಸಿದ್ದಾರೆ. ರೈತ ಪರ ಘೋಷಣೆ ಕೂಗಿ, ಪಟಾಕಿ ಸಿಡಿಸಿ ಸಿಹಿ ತಿನಿಸಿ ಸಂಭ್ರಮಿಸಿದರು.

 

ಈ ವೇಳೆ ಭಾರತೀಯ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಸಿದಗೌಡ ಮೊದಗಿ ಮಾತನಾಡಿ ನವೆಂಬರ್ 19ರ ದಿನ ರೈತರು ಸುವರ್ಣಾಕ್ಷರದಲ್ಲಿ ಬರೆದಿಡುವ ದಿನವಾಗಿದೆ.

ರೈತರಿಗೆ ಮಾರಕವಾಗಿದ್ದ 3 ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಪ್ರಧಾನಿ ಮೋದಿ ಅವರು ವಾಪಸ್ ಪಡೆಯುತ್ತೇವೆ ಎಂದಾಗ ನಮಗೆ ನಂಬಲು ಸಾಧ್ಯವಾಗಲಿಲ್ಲ. ನವೆಂಬರ್ 26ರಂದು ದೊಡ್ಡ ಪ್ರಮಾಣದಲ್ಲಿ ಹೋರಾಟಕ್ಕೆ ಸಜ್ಜಾಗಿದ್ದೇವು. ಅಷ್ಟರೊಳಗೆ ರೈತರಿಗೆ ಪ್ರಧಾನಿ ಮೋದಿ ಅವರು ಸಿಹಿ ಸುದ್ದಿ ಕೊಟ್ಟಿದ್ದಾರೆ.

ಈ ಜಯ ಹುತಾತ್ಮ ರೈತರು ಮತ್ತು ಅವರ ಕುಟುಂಬಸ್ಥರಿಗೆ ಸಲ್ಲುತ್ತದೆ ಎಂದು ಹೇಳಿದರು,

 

ವಿಜಯೋತ್ಸವದಲ್ಲಿ ರೈತ ಮುಖಂಡರಾದ ಚೂನಪ್ಪ ಪೂಜಾರಿ, ಜಯಶ್ರೀ ಗುರನ್ನವರ ಸೇರಿದಂತೆ ಇನ್ನಿತರರು ಭಾಗಿಯಾಗಿದ್ದರು. ಒಟ್ಟಿನಲ್ಲಿ ಅನ್ನದಾತರ ಕೂಗಿಗೆ ಪ್ರಧಾನಿ ಮೋದಿ ಸ್ಪಂದಿಸಿರುವ ಹಿನ್ನೆಲೆ ದೇಶಾಧ್ಯಂತ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ.

📱 Read Top News, Belgaum News Updates, Belagavi News in Kannada, Latest News on News Belgaum