Belagavi News In Kannada | News Belgaum

ಕಾಂಗ್ರೇಸ್ ಪಕ್ಷವನ್ನು ಸೋಲಿಸುವುದು ನಮ್ಮ ಉದ್ಧೇಶವಾಗಿದೆ; ಶಾಸಕ ರಮೇಶ ಜಾರಕಿಹೊಳಿ

ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರನ್ನು ಗೆಲ್ಲಿಸುವದು,

🌐 Belgaum News :

 

ಗೋಕಾಕ: ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರನ್ನು ಗೆಲ್ಲಿಸುವದು ಹಾಗೂ ಕಾಂಗ್ರೇಸ್ ಪಕ್ಷವನ್ನು ಸೋಲಿಸುವದು ನಮ್ಮ ಮೊದಲ ಉದ್ಧೇಶವಾಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅವರು, ಶುಕ್ರವಾರದಂದು ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಕಳೆದ ಬಾರಿ ವಿವೇಕರಾವ ಪಾಟೀಲ ಬಂಡಾಯ ಅಭ್ಯರ್ಥಿಯಾಗಿ ಸ್ಫರ್ಧಿಸಿದ್ದರು ಅವರಿಗೆ ಬೆಂಬಲ ನೀಡಿದ್ದರಿಂದ ಕವಟಗಿಮಠ ಗೆಲವು ಸುಲಭವಾಗಿರಲಿಲ್ಲ. ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರನ್ನ ಮೊದಲ ಸುತ್ತಿನಲ್ಲೆ ಆಯ್ಕೆ ಮಾಡಬೇಕು. ಪಕ್ಷದ ತೀರ್ಮಾನದಂತೆ ಒಂದೇ ಸ್ಥಾನದಲ್ಲಿ ಸ್ಪರ್ಧೆ ಬಿಜೆಪಿ ಸ್ಫರ್ಧಿಸುತ್ತಿದೆ. ಇನ್ನೋಂದು ಸ್ಥಾನವನ್ನ ಸಹೋಧರ ಲಖನ ಜಾರಕಿಹೊಳಿ ಅವರಿಗೆ ಬೇಡುವದಿಲ್ಲ. ಲಖನ್ ಸ್ಫರ್ಧೆ ಕುರಿತು ನಾನು ಪತ್ರಿಕೆಗಳ ಮೂಲಕ ತಿಳಿದುಕೊಂಡಿದ್ದೆನೆ. ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಬೇಕಿದೆ ಹೀಗಾಗಿ ವರಿಷ್ಠರೊಂದಿಗೆ ಚರ್ಚಿಸಿ ಎರಡನೇ ಪ್ರಾಶಸ್ತö್ಯದ ಮತವನ್ನು ಯಾರಿಗೆ ಚಲಾಯಿಸಬೇಕು ಎಂದು ನಿರ್ಧರಿಸಿ ಕಾಂಗ್ರೇಸ್ ಪಕ್ಷವನ್ನು ಸೋಲಿಸೋಣ ಎಂದರು.


ಪಕ್ಷ ಆದೇಶ ನೀಡಿದರೇ ದೇವರ ಪ್ರಮಾಣ ಮಾಡಿ ಹೇಳುತ್ತೇನೆ. ಎರಡು ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನ ಗೆಲ್ಲಿಸುತ್ತೇನೆ. ಪರೋಕ್ಷವಾಗಿ ಸಹೋಧರನಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿಕೊಂಡ ರಮೇಶ ವಿಧಾನ ಪರಿಷತ್ ಸದಸ್ಯ ವಿವೇಕರಾವ ಪಾಟೀಲ ಅವರಿಗೆ ಬಿಜೆಪಿ ಸೇರುವಂತೆ ಮನವಿ ಮಾಡಿ, ಪಕ್ಷದ ವರಿಷ್ಠರು ಒಪ್ಪಿದರೇ ಅವರನ್ನ ಬಿಜೆಪಿ ಪಕ್ಷಕ್ಕೆ ಕರೆತರುವದಾಗಿ ತಿಳಿಸಿದರು.

ಕಾಂಗ್ರೆಸ್ ಪಕ್ಷ ವಿವೇಕ ರಾವ ಪಾಟೀಲ ಅವರಿಗೆ ಅನ್ಯಾಯ ಮಾಡಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುರುಬರಾಗಿ ಕುರಬರಿಗೆ ಅನ್ಯಾಯ ಮಾಡಿದ್ದಾರೆ. ವಿವೇಕರಾವ ಪಾಟೀಲ ಅವರಿಗೆ ಮನಸ್ಸಿಗೆ ನೋವಾದ ಕಾರಣ ಅವರ ಮನೆಗೆ ಹೋಗಿ ಭೇಟಿಯಾಗುತ್ತೆನೆ. ಬೆಳಗಾವಿ ಜನ ಬುದ್ದಿವಂತರಿದ್ದು ಒಳ್ಳೆಯ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತಾರೆ. ಕಾರ್ಯಕರ್ತರು ಉಹಾಪೋಹಳಿಗೆ ಕಿವಿಗೊಡದೆ ಪಕ್ಷದ ಅಭ್ಯರ್ಥಿ ಪರ ಕಾರ್ಯನಿರ್ವಹಿಸಬೇಕು. ಗ್ರಾಮ ಗ್ರಾಮಗಳ ಮೂಲೆ ಮೂಲೆಗೂ ಪಕ್ಷವನ್ನು ಸಂಘಟಿಸಲು ಕಾರ್ಯಕರ್ತರು ಸಜ್ಜಾಗಬೇಕು.ಮುಂಬರುವ ಜಿಲ್ಲಾ ಪಂಚಾಯತಿ ಚುನಾವಣೆಗೆ ತಯಾರಿ ಮಾಡೋಣ, ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿಯನ್ನ ಮತ್ತೊಮ್ಮೆ ಅಧಿಕಾರಕ್ಕೆ ತರೋಣ ಎಂದು ಮಾಜಿ ಸಚಿವ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ರೈತ ಕಾಯ್ದೆ ವಾಪಸ್ ಪಡೆದಿದ್ದು ಸ್ವಾಗತಾರ್ಹ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಹಾಗೂ ಅಮಿತ ಶಾ ರೈತರ ಹಿತಕಾಪಾಡುವ ನಿಟ್ಟಿನಲ್ಲಿ ಈ ನಿರ್ಣಯ ತೆಗೆದುಕೊಂಡಿದ್ದು, ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ವೇದಿಕೆಯ ಮೇಲೆ ಮಾಜಿ ಶಾಸಕ ಎಮ್ ಎಲ್ ಮುತ್ತೆನ್ನವರ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಉಪಾಧ್ಯಕ್ಷ ಬಸವರಾಜ ಆರೇನ್ನವರ, ಸ್ಥಾಯಿ ಸಮಿತಿ ಚೇರಮನ್ ಕುತುಬುದ್ದಿನ ಗೋಕಾಕ, ಓಬಿಸಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಶಿ, ಜಿಪಂ ಮಾಜಿ ಸದಸ್ಯರಾದ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ಬಿಜೆಪಿ ಪದಾಧಿಕಾರಿಗಳಾದ ಪ್ರೇಮಾ ಭಂಡಾರಿ, ಸುಭಾಸ ಪಾಟೀಲ, ಸುರೇಶ ಪಾಟೀಲ, ಶಾಮಾನಂದ ಪೂಜೇರಿ, ಶಫಿ ಜಮಾದಾರ, ಮುಖಂಡರುಗಳಾದ ಅಬ್ಬಾಸ ದೇಸಾಯಿ, ಡಿ ಎಮ್ ದಳವಾಯಿ, ಡಾ. ಜಿ ಆರ್ ಸೂರ್ಯವಂಶಿ, ಕೆ ಡಿ ಕಲಾಲ ಸೇರಿದಂತೆ ನಗರಸಭೆ, ಗ್ರಾಪಂ, ಪಪಂ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಇದ್ದರು.

📱 Read Top News, Belgaum News Updates, Belagavi News in Kannada, Latest News on News Belgaum