Belagavi News In Kannada | News Belgaum

ರಣಭೀಕರ ಮಳೆಗೆ: ಮನೆಯ ಅವಶೇಷದಡಿ ಸಿಲುಕಿ ಮೂವರು ದುರ್ಮಣ

🌐 Belgaum News :

ಅನಂತಪುರ: ರಣಭೀಕರ ಮಳೆಗೆ ಅನಂತಪುರದಲ್ಲಿ ಮನೆಗಳು ಧರೆಗುರುಳಿದ್ದು, ಮನೆಯ ಅವಶೇಷದಡಿ ಸಿಲುಕಿ ಸೇರಿ ಮೂರು ಅಸುನೀಗಿರುವ ದುರ್ಘಟನೆ ತಮಿಳುನಾಡಿನಲ್ಲಿ ಇಂದು ನಡೆದಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಆಂಧ್ರದಲ್ಲಿ ಭಾರೀ ಮಳೆಯಾಗುತ್ತಿದ್ದು, 17 ಮಂದಿ ಮೃತಪಟ್ಟಿದ್ದಾರೆ.

ಭಾರೀ ಮಳೆಗೆ ಅನಂತಪುರದ ಕದಿರಿ ಪಟ್ಟಣದಲ್ಲಿ ಎರಡು ಕಟ್ಟಡಗಳು ಕುಸಿದು ಬಿದ್ದಿದ್ದು, ಮೂರು ಮಂದಿ ಮೃತಪಟ್ಟಿದ್ದಾರೆ. ಅಕ್ಕಪಕ್ಕದಲ್ಲಿದ್ದ ಎರಡು ಕಟ್ಟಡಗಳು ಧರೆಗುರುಳಿವೆ. ಎರಡಂತಿಸ್ತನ ಒಂದು ಕಟ್ಟಡ ಪಕ್ಕದ ಕಟ್ಟಡದ ಮೇಲೆ ಬಿದ್ದಿದ್ದು, ಇಬ್ಬರು ಮಕ್ಕಳು ಸೇರಿ ಮೂರು ಮಂದಿ ಮೃತಪಟ್ಟಿದ್ದಾರೆ.

ಅಧಿಕಾರಿಗಳು ಸ್ಥಳಕ್ಕೆ ತಕ್ಷಣ ದಾವಿಸಿದ್ದು, ಕಟ್ಟಡದ ಅವಶೇಷಗಳಡಿ ಸಿಲುಕಿದ್ದ 15 ಮಂದಿಯಲ್ಲಿ ಆರು ಮಂದಿಯನ್ನು ರಕ್ಷಿಸಿದ್ದಾರೆ. ರಕ್ಷಣಾ ಕಾರ್ಯ ಮುಂದುವರಿದಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.//////

📱 Read Top News, Belgaum News Updates, Belagavi News in Kannada, Latest News on News Belgaum