Belagavi News In Kannada | News Belgaum

ನಿರಂತರ ಲೈಂಗಿಕ ದೌರ್ಜನ್ಯ: ಹೆಣ್ಣು ಮಗುವಿಗೆ ಸಹಜ ಜನ್ಮ ನೀಡಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ

🌐 Belgaum News :

ಉಪ್ಪಿನಂಗಡಿ: ನಿರಂತರ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಹೆಣ್ಣು ಮಗುವಿಗೆ ಸಹಜ ಹೆರಿಗೆಯಲ್ಲಿ ಜನ್ಮ ನೀಡಿದ ಘಟನೆ ಉಪ್ಪಿನಂಗಡಿ ನಡೆದಿದೆ. ಅಪ್ರಾಪ್ತೆ ದೂರಿನ ಬಳಿಕ ಪೊಲೀಸ್ ರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ವಿದ್ಯಾರ್ಥಿನಿಯನ್ನು ವಿಚಾರಿಸಿದಾಗ ಹಿರೆಬಂಡಾಡಿ ಗ್ರಾಮದ ಮದ್ಮೆತ್ತಿ ಮಾರು ಮನೆ ನಿವಾಸಿ ಕೇಶವ (34 ವ) ತನ್ನನ್ನು ಅತ್ಯಾಚಾರವೆಸಗಿರುವುದನ್ನು ತಿಳಿಸಿದ್ದಾಳೆ.

ಪ್ರೌಢಶಾಲೆಯೊಂದರಲ್ಲಿ ಪ್ರಸಕ್ತ ಹತ್ತನೇ ತರಗತಿ ಕಲಿಯುತ್ತಿರುವ ಈ ವಿದ್ಯಾರ್ಥಿನಿಯ ಉದರದಲ್ಲಿ ಗೆಡ್ಡೆ ಬೆಳೆದಿದೆ ಎಂದು ತಿಳಿದು ಹೆತ್ತವರು ಆಸ್ಪತ್ರೆಗೆ ದಾಖಲಿಸಿದಾಗ ಆಕೆ ತುಂಬು ಗರ್ಭವತಿಯಾಗಿರುವುದು ಬೆಳಕಿಗೆ ಬಂದಿತ್ತು.

ಆಕೆ ಮಂಗಳೂರು ಪರಿಸರದ ಆಸ್ಪತ್ರೆಯೊಂದರಲ್ಲಿ ಗುರುವಾರ ಸಹಜ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆಸ್ಪತ್ರೆಯ ವೈದ್ಯಾಧಿಕಾರಿಗಳು ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರ ಗಮನಕ್ಕೆ ತಂದಿದ್ದರು.
ಈ ಹಿನ್ನೆಲೆಯಲ್ಲಿ ಅವಿವಾಹಿತ ಕೇಶವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಅಪ್ರಾಪ್ತ ವಯಸ್ಕರ ಮೇಲಿನ ಅತ್ಯಾಚಾರ ನಿಯಂತ್ರಣ ಕಾಯ್ದೆಯಡಿ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.//////

📱 Read Top News, Belgaum News Updates, Belagavi News in Kannada, Latest News on News Belgaum