Belagavi News In Kannada | News Belgaum

ರಾಜ್ಯದಲ್ಲಿ ಮತ್ತೆ ಬಡವರ ಪರ ಸರ್ಕಾರ ಬರಬೇಕಾದ್ರೆ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸಿ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

🌐 Belgaum News :

ಖಾನಾಪುರ : 2023ಕ್ಕೆ ಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಗೆಲ್ಲಬೇಕು. ರಾಜ್ಯದಲ್ಲಿ ಮತ್ತೆ ಬಡವರ ಪರ ಸರ್ಕಾರ ಬರಬೇಕಾದರೆ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮನವಿ ಮಾಡಿದರು.

ತಾಲ್ಲೂಕಿನ ವಿಧಾನಸಭಾ ಮತಕ್ಷೇತ್ರದ ಗ್ರಾಮ ಪಂಚಾಯತ ಚುನಾಯಿತ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಡಿ.10ರಂದು ಜರುಗುವ ವಿಧಾನಪರಿಷತ್ ಚುನಾವಣೆಗೆ ನಿಮ್ಮೆಲ್ಲರಿಗೂ ಚಿರಪರಚಿತರಿರುವ ಚನ್ನರಾಜ ಹಟ್ಟಿಹೊಳಿ  ಕಾಂಗ್ರೆಸ್ ಅಭ್ಯರ್ಥಿಯಾಗಿ  ಸ್ಪರ್ಧೆ ಮಾಡಿದ್ದಾರೆ. ಅವರನ್ನು ಗೆಲ್ಲಿಸಲು ಬೆಳಗಾವಿ ಜಿಲ್ಲೆಯ ಎಲ್ಲ  ಶಾಸಕರು, ಮಾಜಿ ಶಾಸಕರು ನಾಯಕರು, ಮುಖಂಡರು ಶ್ರಮಿಸಬೇಕು ಎಂದು ಮನವಿ ಮಾಡಿದರು.

ಯಾರಿಗೆ ಗೆಲ್ಲುವ ಶಕ್ತಿ, ಕೆಲಸ ಮಾಡುವ ಸಾಮರ್ಥ್ಯ ಇದೆ. ಅಂತಹ ಅಭ್ಯರ್ಥಿ ಆಯ್ಕೆ ಮಾಡಬೇಕು ಎಂದು ಸ್ಥಳೀಯ ನಾಯಕರು ಸಭೆ ನಡೆಸಿ, ಒಮ್ಮತದಿಂದ ಚನ್ನರಾಜ್ ಹಟ್ಟಿಹೊಳಿ ಅವರನ್ನು ನೇಮಕ ಮಾಡುವ ಮೂಲಕ ರಾಜ್ಯ ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರಿಗೆ ಸಿಫಾರಸ್ಸು ಮಾಡಲಾಗಿತ್ತು ಎಂದರು.

ಕಳೆದ ಮೂರು ವರ್ಷಗಳಿಂದ ಈ ಭಾಗದ ಶಾಸಕರಾದ ಅಂಜಲಿ ನಿಂಬಾಳ್ಕರ್ ಅವರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ರಸ್ತೆ, ಕೆರೆ ತುಂಬಿಸುವ ಕಾರ್ಯ, ಶಾಲಾ ಕಟ್ಟಡ, ಅಂಗನವಾಡಿ ಕಟ್ಟಡ ನಿರ್ಮಾಣ ಸೇರಿದಂತೆ ಅನೇಕ ಕೆಲಸಗಳನ್ನು ಮಾಡಿದ್ದಾರೆ. ಆ ಆದಾರದ ಮೇಲೆ ಕಾಂಗ್ರೆಸ್ ಅಭ್ಯರ್ಥಿಗೆ ಮತಗಳನ್ನು ನೀಡಬೇಕು ಎಂದು ಮನವಿ ಮಾಡಲು ಆಗಮಿಸಿದ್ದೇವೆ.

ಈ ಹಿಂದೆ ಇದ್ದಂತ ಖಾನಾಪುರ ಶಾಸಕರು ಭಾಷೆಗೆ ಸಿಮಿತವಾಗಿದ್ದರು. ಆದರೆ ಈಗಿರುವ ಕಾಂಗ್ರೆಸ್ ಪಕ್ಷದ ಶಾಸಕಿ ಅಂಜಲಿ ನಿಂಬಾಳ್ಕರ್ ಇಡೀ ಖಾನಾಪುರ ಒಂದೇ ಎಂಬ ಭಾವನೆಯಲ್ಲಿ ಕೆಲಸಗಳನ್ನು ಮಾಡುತ್ತಿದ್ದಾರೆ. ಇದರಿಂದ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಬೇಕು. ಚನ್ನರಾಜ್ ಹಟ್ಟಿಹೊಳಿ  ಶಾಸಕರೊಂದಿಗೆ ಸೇರಿ ಸರ್ಕಾರದ ಯೋಜನೆಗಳನ್ನು ನಿಮಗೆ ತಲುಪಿಸುವ ಕಾರ್ಯವನ್ನು ಮಾಡಲಿದ್ದಾರೆ ಎಂಬ ಭರವಸೆ ನೀಡಿದರು.

ಕಾಂಗ್ರೆಸ್ ಕೆಲಸ 24×7  ಇದ್ದಂತೆ, ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚು ಒತ್ತು ನೀಡುತ್ತದೆ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹತ್ತಿರದ ಬೆಳಗಾವಿಯಲ್ಲಿ ಇರಲಿದ್ದಾರೆ. ಚನ್ನರಾಜ ಹಟ್ಟಿಹೊಳಿ ಇಲ್ಲಿಯೇ ಹುಟ್ಟಿ ಬೆಳೆದವರು. ಆದ್ದರಿಂದ ನಿಮ್ಮ ಕಾರ್ಯವನ್ನು ಮಾಡಿ ಕೊಡಲಿದ್ದಾರೆ ಎಂಬ ಭರವಸೆ ಇದೆ. ಆದ ಕಾರಣ ಮತದಾರರು ಮತ ನೀಡಬೇಕು ಎಂದು ವಿನಂತಿಸಿಕೊಂಡರು.

ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್, ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಬೆಳಗಾವಿ ಜಿಲ್ಲಾ ಗ್ರಾಮೀಣ ಅಧ್ಯಕ್ಷ ವಿನಯ ನಾವಲಗಟ್ಟಿ, ಮಹದೇವ ಕೋಳೆಕರ, ಅನಿತಾ , ಗೀತಾ, ಅಡಿವೇಶ ಇಟಗಿ, ಯುವರಾಜ ಕದಮ್,  ಸುರೇಖಾ ಕಲಕರ್ಣಿ, ಕಾರ್ತಿಕ ಪಾಟೀಲ , ಕಾಂಗ್ರೆಸ್ ಪಕ್ಷದ ಮುಖಂಡರು, ವಿವಿಧ ಘಟಕದ ಅಧ್ಯಕ್ಷರು, ಬ್ಲಾಕ್ ಅಧ್ಯಕ್ಷರು ಇತರರು ಈ ಸಂದರ್ಭದಲ್ಲಿ ಇದ್ದರು./////

📱 Read Top News, Belgaum News Updates, Belagavi News in Kannada, Latest News on News Belgaum