Belagavi News In Kannada | News Belgaum

ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಚನ್ನರಾಜ ಹಟ್ಟಿಹೊಳಿ ಮಂಗಳವಾರ ಬೆಳಗ್ಗೆ ನಾಮಪತ್ರ ಸಲ್ಲಿಸಿದರು.

🌐 Belgaum News :

 

ಬೆಳಗಾವಿ – ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಚನ್ನರಾಜ ಹಟ್ಟಿಹೊಳಿ ಮಂಗಳವಾರ ಬೆಳಗ್ಗೆ ನಾಮಪತ್ರ ಸಲ್ಲಿಸಿದರು.

ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಆಗಮಿಸಿದ ಚನ್ನರಾಜ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಗಳಿಗೆ ನಾಮಪತ್ರ ಸಲ್ಲಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ  ಸತೀಶ್ ಜಾರಕಿಹೊಳಿ, ಶಾಸಕರಾದ ಅಂಜಲಿ ನಿಂಬಾಳಕರ್, ಲಕ್ಷ್ಮಿ ಹೆಬ್ಬಾಳಕರ್, ಗಣೇಸ ಹುಕ್ಕೇರಿ, ಮಹಾಂತೇಶ ಕೌಜಲಗಿ, ಮಾಜಿ ಸಚಿವ ಎ.ಬಿ.ಪಾಟೀಲ, ಮಾಜಿ ಶಾಸಕ ಶಾಮ್ ಘಾಟಗೆ, ಫಿರೋಜ್ ಸೇಠ್, ವಿನಯ ನಾವಲಗಟ್ಟಿ ಸೇರಿದಂತೆ ಹಲವಾರು ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಮಹಾಲಕ್ಷ್ಮೀ ಸನ್ನಿಧಿಯಲ್ಲಿ ಪ್ರಾರ್ಥನೆ
– ಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ತಿನ ಚುನಾವಣೆಗೆ ಸ್ಪರ್ಧಿಸಿರುವ ಚನ್ನರಾಜ ಹಟ್ಟಿಹೊಳಿ ಅವರಿಗೆ ಚುನಾವಣೆಯಲ್ಲಿ ಜಯಸಿಗಲಿ ಎಂದು ಪ್ರಾರ್ಥಿಸಿ ನಾಮಪತ್ರ ಸಲ್ಲಿಕೆಗೂ ಮುನ್ನ ಮಂಗಳವಾರ ಮುಂಜಾನೆ ಸುಳೇಬಾವಿಯ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು.
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ, ಮೃಣಾಲ ಹೆಬ್ಬಾಳಕರ್, ತಾಲೂಕು ಪಂಚಾಯಿ ಮಾಜಿ ಅಧ್ಯಕ್ಷ ಶಂಕರಗೌಡ ಪಾಟೀಲ, ಬಸವರಾಜ ಮ್ಯಾಗೋಟಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಈ ಚುನಾವಣೆಯಲ್ಲಿ ಪ್ರಜ್ಞಾವಂತ ಮತದಾರರು ಚನ್ನರಾಜ ಹಟ್ಟಿಹೊಳಿಗೆ ಮತ ನೀಡಿ ಆರಿಸಿ ತರಬೇಕು ಎಂದು ಲಕ್ಷ್ಮಿ ಹೆಬ್ಬಾಳಕರ್ ಈ ಸಂದರ್ಭದಲ್ಲಿ ಪಂಚಾಯಿತಿ ಪ್ರತಿನಿಧಿಗಳಲ್ಲಿ ವಿನಂತಿಸಿದರು.

 

 

📱 Read Top News, Belgaum News Updates, Belagavi News in Kannada, Latest News on News Belgaum