Belagavi News In Kannada | News Belgaum

ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳ ಸಭೆ

🌐 Belgaum News :

ಬೆಳಗಾವಿ ತಾಲೂಕಿನಲ್ಲಿ ನವೆಂಬರ ತಿಂಗಳಿನಲ್ಲಿ ಅತಿವೃಷ್ಟಿಯಿಂದ ಆದ ಬೆಳೆ ಹಾನಿ ಸಮೀಕ್ಷೆ ಕೈಗೊಳ್ಳುವ ಕುರಿತಂತೆ ದಿನಾಂಕ 23-11-2021 ರಂದು ಬೆಳಿಗ್ಗೆ 10.30 ಗಂಟೆಗೆ ತಹಶೀಲ್ದಾರರ ಕಛೇರಿಯಲ್ಲಿ ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳ ಸಭೆಯನ್ನು ಕರೆಯಲಾಗಿತ್ತು.

ಸಭೆಯಲ್ಲಿ ಭಾಗವಹಿಸಿದ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರಾದ ಶ್ರೀ.ಶಿವನಗೌಡ ಪಾಟೀಲ, ಇವರು ಮಾತನಾಡಿ ಈ ಅಕಾಲಿಕ ಮಳೆಯಿಂದ ಕಟಾವಿಗೆ ಬಂದು ನಿಂತ ಭತ್ತ ಹಾಗೂ ಇನ್ನಿತರೆ ಬೆಳೆಗಳಿಗೆ ತೀವ್ರ ಹಾನಿಯಾಗಿದ್ದು, ಸಮರೋಪಾದಿಯಲ್ಲಿ ಮೂರು ಇಲಾಖೆಗಳ ಅಧಿಕಾರಿಗಳು ಜಂಟಿಯಾಗಿ ಬೆಳೆ ಹಾನಿ ಸಮೀಕ್ಷೆ ಮಾಡಿ ವರದಿ ಸಲ್ಲಿಸಬೇಕೆಂದು ಹೇಳಿದರು.

 

ಹಾಗೆಯೇ ಅರ್ಹ ರೈತರ ಅರ್ಜಿಗಳನ್ನು ಪರಿಹಾರ ತಂತ್ರಾಂಶದಲ್ಲಿ ವಿಳಂಬ ಮಾಡದೇ ನೊಂದಣಿ ಮಾಡುವ ಕೆಲಸವಾಗಬೇಕೆಂದು ತಿಳಿಸಿದರು. ಬೆಳಗಾವಿ ವಿಭಾಗದ ಉಪ ಕೃಷಿ ನಿರ್ದೇಶಕರಾದ ಶ್ರೀ.ಹೆಚ್.ಡಿ.ಕೋಳೆಕರ, ಇವರು ಜಂಟಿ ಬೆಳೆ ಹಾನಿ ಸಮೀಕ್ಷೆಯ ಕಾರ್ಯದ ಬಗ್ಗೆ ವಿವರವಾಗಿ ಮಾರ್ಗದರ್ಶನ ನೀಡಿದರು.

ಸಭೆಯಲ್ಲಿ ಬೆಳಗಾವಿ ತಾಲೂಕಿನ ತಹಶೀಲ್ದಾರ ಶ್ರೀ.ಕುಲಕರ್ಣಿ, ಸಹಾಯಕ ಕೃಷಿ ನಿರ್ದೇಶಕರು ಶ್ರೀ.ಆರ್.ಬಿ.ನಾಯ್ಕರ,ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಶ್ರೀ ಪ್ರವೀಣ ಮಹೇಂದ್ರಕರ ಹಾಗೂ ಸಹಾಯಕ ಕೃಷಿ ನಿರ್ದೇಶಕರು(ಉಸ್ತುವಾರಿ ಮತ್ತು ಮೌಲ್ಯಮಾಪನ) ಶ್ರೀ.ಮಂಜುನಾಥ ಕಿತ್ತೂರು, ತಾಲೂಕಿನ ಕೃಷಿ ಅಧಿಕಾರಿಗಳು, ಸಹಾಯಕ ಕೃಷಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಸಹಾಯಕ ತೋಟಗಾರಿಕಾ ಅಧಿಕಾರಿಗಳು ಉಪಸ್ಧಿತರಿದ್ದರು.

📱 Read Top News, Belgaum News Updates, Belagavi News in Kannada, Latest News on News Belgaum