Belagavi News In Kannada | News Belgaum

ವರುಣಾರ್ಭಟ ನಲುಗಿದ ಕರ್ನಾಟಕ: ಕುಂಭದ್ರೋಣ ಮಳೆಗೆ ರೈತ ತಲ್ಲಣ

🌐 Belgaum News :

ಬೆಂಗಳೂರು:  ಕರಾವಳಿ ತೀರದಲ್ಲಿ ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ  8 ದಿನಗಳಿಂದ ವರುಣಾರ್ಭಟ ಹೆಚ್ಚಾಗಿದ್ದು,   ನ. 28ರವರೆಗೂ ಕೆಲವೆಡೆ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ:   ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿಯಲ್ಲಿ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ನಿರಂತರವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆಯಿಂದಾಗಿ ಬೆಂಗಳೂರು ಸೇರಿದಂತೆ, ರಾಜ್ಯದಲ್ಲಿ ಒಂದೆಡೆ ಕೆರೆ-ಕಟ್ಟೆಗಳು ಒಡೆಯುತ್ತಿದ್ದಾರೆ, ಇದರಿಂದ ಸೃಷ್ಟಿಯಾದ ಅವಾಂತರಗಳಿಂದ ಜನಸಾಮಾನ್ಯರ ಸಹನೆ ಕಟ್ಟೆ ಒಡೆದಿದೆ.

ರಾಜ್ಯದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆ ತಕ್ಷಣಕ್ಕೆ ನಿಲ್ಲುವ ಸಾಧ್ಯತೆಗಳು ಗೋಚರಿಸುತ್ತಿಲ್ಲ. ಈಗಾಗಲೇ ಮಳೆ ಹಾಗೂ ನೆರೆಹಾವಳಿಯಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದು ನಿಂತ ಬೆಳೆ ಸಂಪೂರ್ಣ ನಾಶವಾಗಿದೆ. ಹೀಗಾಗಿ ತರಕಾರಿ ಬೆಲೆಗಳು ಗಗನಕ್ಕೇರಿವೆ. ಈ ತಿಂಗಳ 29ರವರೆಗೂ ಮಳೆ ಮುಂದುವರಿಯಲಿದೆ.

ನ. 29 ರಾಜ್ಯಕ್ಕೆ ಮತ್ತೊಂದು ಚಂಡಮಾರುತದ ಭೀತಿ ಎದುರಾಗಿರುವ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಚಂಡಮಾರುತವಾಗಿ ರೂಪಾಂತರಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಬಹುತೇಕ ಕಡೆ ಇನ್ನೂ ಮೂರ್ನಾಲ್ಕು ದಿನಗಳ ಕಾಲ ಮಳೆ ಬೀಳುವ ಸಾಧ್ಯತೆಯಿದೆ.


8495ಮನೆಗಳಿಗೆ ಭಾಗಶಃ ಹಾನಿ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರು, ಮೈಸೂರು, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಪ್ರಸ್ತುತ ಸುರಿಯುತ್ತಿರುವ ಮಳೆ ನ. 25ರವರೆಗೆ ಕ್ಷೀಣಿಸಲಿದ್ದು, ರಾಜ್ಯಕ್ಕೆ ಮತ್ತೊಂದು ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದೆ.

ರಾಜ್ಯದ ಹಲವೆಡೆ ಸುರಿದ ಮಳೆಯಿಂದಾಗಿ ಇದುವರೆಗೆ 24 ಮಂದಿ ಸಾವನ್ನಪ್ಪಿದ್ದಾರೆ. 1600ಕ್ಕೂ ಹೆಚ್ಚು ಮನೆಗಳು ಹಾನಿಗೀಡಾಗಿವೆ. ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ, ಮತ್ತಿತರರ ಜಿಲ್ಲೆಗಳಲ್ಲಿ ಲಕ್ಷಾಂತರ ಪ್ರದೇಶದಲ್ಲಿ ಬೆಳೆಯಲಾದ ಬೆಳೆಗಳು ನೀರು ಪಾಲಾಗಿವೆ. ಇದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

2200ಕಿಮೀ ರಸ್ತೆಗಳು ಹಾನಿಗೀಡಾಗಿವೆ. 125ಶಾಲಾ ಕಟ್ಟಡಗಳು,39 ಸಾರ್ವಜನಿಕ ಕೇಂದ್ರಗಳು ಹಾನಿಗೀಡಾಗಿವೆ. 658 ಮನೆಗಳು ಸಂಪೂರ್ಣವಾಗಿ ಕುಸಿದು ಬಿದ್ದಿವೆ. 8495ಮನೆಗಳಿಗೆ ಭಾಗಶಃ ಹಾನಿಯಾಗಿದೆ./////

📱 Read Top News, Belgaum News Updates, Belagavi News in Kannada, Latest News on News Belgaum