Belagavi News In Kannada | News Belgaum

ಮಂಗಳೂರಲ್ಲಿ ಗ್ಯಾಂಗ್ ರೇಪ್ ಮಾಡಿ 2 ವರ್ಷದ ಬಾಲಕಿ ಹತ್ಯೆ !

🌐 Belgaum News :

ಮಂಗಳೂರು : ಮಂಗಳೂರು ಹೊರವಲಯದಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್ ಮಾಡಿ ಹತ್ಯೆ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ನಾಲ್ವರು ಆರೋಪಿಗಳು ಮಧ್ಯ ಪ್ರದೇಶ ಮತ್ತು ಜಾರ್ಖಂಡ ಮೂಲದ ಆರೋಪಿಗಳಾಗಿದ್ದಾರೆ.

ನವೆಂಬರ್ 21ರ ಸಂಜೆ ಟೈಲ್ಸ್ ಫ್ಯಾಕ್ಟರಿಯ ಆವರಣದಲ್ಲಿ ಬಾಲಕಿಯ ಮೇಲೆ ಗ್ಯಾಂಗ್​ ರೇಪ್​ ಮಾಡಿ ಬಳಿಕ ಉಸಿರುಗಟ್ಟಿಸಿ ಕೊಲೆ ಮಾಡಿದ್ದರು. ಬಳಿಕ ಬಾಲಕಿಯ ಮೃತದೇಹವನ್ನು ಫ್ಯಾಕ್ಟರಿಯ ಡ್ರೈನೇಜ್​ನಲ್ಲಿ ಬಿಸಾಕಿದ್ದರು.

ಜಾರ್ಖಂಡ್ ಮೂಲದ ವಲಸೆ ಕಾರ್ಮಿಕ ದಂಪತಿ 2 ವರ್ಷದ ಮಗಳೊಂದಿಗೆ ಟೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಬಾಲಕಿಯ ಮೃತ ದೇಹ ಪತ್ತೆಯಾದ ಬಳಿಕ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು, ಪ್ರಕರಣದ ತನಿಖೆಗೆ 4 ಪೊಲೀಸ್ ಅಧಿಕಾರಿಗಳ ತಂಡ ರಚಿಸಿದ್ದರು. ಆ ಬಳಿಕ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ 20 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಸಂದರ್ಭದಲ್ಲಿ ಆರೋಪಿಗಳ ಕೃತ್ಯ ಬೆಳಕಿಗೆ ಬಂದಿದೆ./////

📱 Read Top News, Belgaum News Updates, Belagavi News in Kannada, Latest News on News Belgaum