Belagavi News In Kannada | News Belgaum

ಸ್ಮಾರ್ಟ್ ಸಿಟಿ ಇಂಜಿನಿಯರ್ ಲಿಂಗೇಗೌಡಗೆ ಎಸಿಬಿ ಶಾಕ್

🌐 Belgaum News :

ಮಂಗಳೂರು:  ಸ್ಮಾರ್ಟ್ ಸಿಟಿ ಲಿಮಿಟೆಡ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಲಿಂಗೇಗೌಡ ಅವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.

 

ಮಂಗಳೂರಿನ ಉರ್ವದ ಲಿಂಗೇಗೌಡ ಅವರ ಮನೆಗೆ ಏಳು ಮಂದಿ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ರಾಜ್ಯಾದ್ಯಂತ ಹಲವೆಡೆ ಇಂದು ಎಸಿಬಿ ದಾಳಿ ನಡೆದಿದ್ದು ಮಂಗಳೂರಿನಲ್ಲೂ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

 

ಹಲವು ವರ್ಷಗಳಿಂದ ಮಂಗಳೂರಿನಲ್ಲೇ ಬೇರೆ ಬೇರೆ ಹುದ್ದೆಯಲ್ಲಿ ಮುಂದುವರಿದಿರುವ ಲಿಂಗೇಗೌಡರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿತ್ತು. ಈ ಹಿಂದೆಯೂ ಲಿಂಗೇಗೌಡರ ಮನೆ ಮೇಲೆ ಎಸಿಬಿ ದಾಳಿಯಾಗಿತ್ತು.

ಸ್ಮಾರ್ಟ್ ಸಿಟಿ ಇಂಜಿನಿಯರ್ ಲಿಂಗೇಗೌಡಗೆ ಎಸಿಬಿ ಶಾಕ್

ಈ ನಡುವೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ಲಿಂಗೇಗೌಡ ಅವರ ಸ್ವಗ್ರಾಮ ಕಣ್ಣೂರು ಸೇರಿದಂತೆ ಅವರ ಸಂಬಂಧಿಗಳ ಮನೆಯನ್ನೂ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ತಂಡ ಜಾಲಾಡುತ್ತಿದೆ.

 

ಗೌರಿ ಶಂಕರ ಕಲ್ಯಾಣ ಮಂಟಪ, ಹತ್ತಾರು ಎಕರೆ ಕೃಷಿ ಭೂಮಿ, ಮನೆಗಳು, ವಾಹನಗಳ ದಾಖಲೆ – ಆದಾಯದ ಮೂಲವನ್ನು ಎಸಿಬಿ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

📱 Read Top News, Belgaum News Updates, Belagavi News in Kannada, Latest News on News Belgaum