Belagavi News In Kannada | News Belgaum

ಕೂಲಿ ಕಾರ್ಮಿಕರಿಗೆ ನರೇಗಾ ಯೋಜನೆ ಆಸರೆ: ಗುಜನಟ್ಟಿ

🌐 Belgaum News :

ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಉದ್ಯೋಗ ಖಾತರಿ ಯೋಜನೆಯಡಿ   ಇಂದು ರೋಜಗಾರ್‌ ದಿವಸ್‌ ಆಚರಿಸಲಾಯಿತು.

ನರೇಗಾ ಯೋಜನೆಯ ತಾಲೂಕು ಐಇಸಿ ಸಂಯೋಜಕ ಶಂಕರ ಗುಜನಟ್ಟಿ ಮಾತನಾಡಿ, ಗ್ರಾಮೀಣ ಪ್ರದೇಶಗಳಿಗೆ ಮೂಲಸೌಕರ್ಯ ಕಲ್ಪಿಸುವ ಅಭಿವೃದ್ಧಿ ಹಾಗೂ ಗುಳೆ ತಪ್ಪಿಸಲು ಸ್ಥಳೀಯರಿಗೆ ಉದ್ಯೋಗ ಸೃಷ್ಟಿಸುವ ಉದ್ದೇಶದಿಂದ ನರೇಗಾ ಯೋಜನೆ ರೂಪಿಸಲಾಗಿದೆ. ನರೇಗಾದಿಂದ ಈಗಾಗಲೇ ಗ್ರಾಮೀಣ ಪ್ರದೇಶಗಳಲ್ಲಿ ಹಲವು ಕಾಮಗಾರಿ ಅನುಷ್ಠಾನಗೊಳಿಸಲಾಗುತ್ತಿದೆ. ಆದರೆ, ಈ ಯೋಜನೆಯು ಕೂಲಿ ಕಾರ್ಮಿಕರಿಗೆ ಆಸರೆಯಾಗಿದ ಎಂದು ಹೇಳಿದರು.

ಪಿಡಿಒ ಎಸ್.ಎಲ್. ಬಬಲಿ ಮಾತನಾಡಿ, ನರೇಗಾ ಯೋಜನೆಯಡಿ ಸ್ಥಳೀಯ ಜನರಿಗೆ ಉದ್ಯೋಗ ನೀಡುವ ಜೊತೆಗೆ ಮುಂದಿನ ಪೀಳಿಗೆ, ಪ್ರಾಣಿ, ಪಕ್ಷಿಗಳಿಗೆ ಅನುಕೂಲವಾಗುವಂತಹ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಈ ಯೋಜನೆ ನಿರಂತರವಾಗಿ ಚಾಲ್ತಿಯಲ್ಲಿರುತ್ತದೆ. ಗ್ರಾಮಸ್ಥರು ಯಾವಾಗ ಬೇಕಾದರು ಗ್ರಾಮ ‌ಪಂಚಾಯತಿಗೆ ಭೇಟಿ ನೀಡಿ, ಯೋಜನೆಯಡಿ ನೋಂದಣಿ ಮಾಡಿಸಿಕೊಳ್ಳಬಹುದು. ಜೊತೆಗೆ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದರು.

ಗ್ರಾಪಂ ಕಾರ್ಯದರ್ಶಿ ಸಿ.ಬಿ. ಕರಗಾವಿ, ಬಿಎಫ್ ಟಿ ರಾಜು ಹಾರೂಗೇರಿ, ಯಲ್ಲಪ್ಪ ಪಿಡಾಯಿ ಸೇರಿ ಇನ್ನಿತರ ಸಿಬ್ಬಂದಿ ಹಾಗೂ ಗ್ರಾಮಸ್ಥರು ಹಾಜರಿದ್ದರು./////

📱 Read Top News, Belgaum News Updates, Belagavi News in Kannada, Latest News on News Belgaum