Belagavi News In Kannada | News Belgaum

ಲೋಕಸಭೆಯಲ್ಲಿ ಮಂಡಿಸಲಾಗಿದ್ದು, ಮಸೂದೆಯನ್ನು ಅಂಗೀಕರಿಸಲಾಗಿದೆ. ಇದು ರೈತರ ಐತಿಹಾಸಿಕ ಗೆಲುವಾಗಿದೆ.

ನವದೆಹಲಿ :  ರೈತ ವಿರೋಧ ಮೂರು ಕೃಷಿ  ಕಾನೂನುಗಳ ರದ್ದತಿ ಮಸೂದೆ ಇಂದು ಲೋಕಸಭೆಯಲ್ಲಿ ಮಂಡಿಸಲಾಗಿದ್ದು, ಮಸೂದೆಯನ್ನು ಅಂಗೀಕರಿಸಲಾಗಿದೆ.  ಇದು ರೈತರ ಐತಿಹಾಸಿಕ ಗೆಲುವಾಗಿದೆ.

 

ಲೋಕಸಭಾ ಕಲಾಪ ಪುನರಾರಂಭವಾದ ನಂತರ, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ‘ಕೃಷಿ ಕಾನೂನುಗಳ ರದ್ದತಿ ಮಸೂದೆ 2021 ಅನ್ನು ಮಂಡಿಸಿದರು. ನಂತರ ಪ್ರತಿಪಕ್ಷಗಳ ಸಂಸದರ ಗದ್ದಲದ ನಡುವೆ ಮಸೂದೆಯನ್ನು ಸದನದಲ್ಲಿ ಅಂಗೀಕರಿಸಲಾಯಿತು.  ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಮಸೂದೆಯನ್ನು ಸದನದಲ್ಲಿ ಚರ್ಚಿಸಬೇಕೆಂದು ಒತ್ತಾಯಿಸಿದರು.

 

ವಿಧೇಯಕ ಅಂಗೀಕಾರದ ನಂತರ, ಪ್ರತಿಪಕ್ಷಗಳ ಸದಸ್ಯರ ಗದ್ದಲದ ನಡುವೆ ಲೋಕಸಭೆಯನ್ನು ಮಧ್ಯಾಹ್ನ 2 ಗಂಟೆಗೆ ಮತ್ತೆ ಮುಂದೂಡಲಾಯಿತು. ಮೂರು ‘ಕೃಷಿ ಕಾನೂನುಗಳ ರದ್ದತಿ ಮಸೂದೆ 2021’ ಅನ್ನು ಶುಕ್ರವಾರ ರಾಜ್ಯಸಭಾ ಸದಸ್ಯರ ನಡುವೆ ಮಂಡಿಸಲಾಗಿದೆ.

 

ನವೆಂಬರ್ 19 ರಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಗುರುನಾನಕ್ ಜಯಂತಿಯ ದಿನದಂದು ಮೂರು ಕೇಂದ್ರ ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದರು. ಕಳೆದ ವಾರ ಈ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 23 ರಂದು ಮುಕ್ತಾಯಗೊಳ್ಳಲಿದೆ.