Belagavi News In Kannada | News Belgaum

ವೀವಿದ್ ಯೋಜನೆಗಳಿಗೆ ಅರ್ಜಿ ಆಹ್ವಾನ

ಬಿ.ಇಡಿ ಕೋರ್ಸ್ ದಾಖಲಾತಿ ಪ್ರಕ್ರಿಯೆ ಆರಂಭ 

 

ಬೆಳಗಾವಿ, ನ.030 : 2021-22 ನೇ ಸಾಲಿನ ಶೈಕ್ಷಣಿಕ ವರ್ಷದ ಎರಡು ವರ್ಷದ ಬಿ.ಇಡಿ ಕೋರ್ಸಿನ ದಾಖಲಾತಿ ಪ್ರಕ್ರಿಯೆ 1-12-2021 ರಿಂದ 10-12-2021 ರವರೆಗೆ ನಡೆಯಲಿದೆ.
ದಾಖಲಾತಿ ಬಯಸಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿರುವ ಹಾಗೂ ರೋಸ್ಟರ್ ದಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ತಮಗೆ ನಿಗದಿಪಡಿಸಿದ ದಿನಾಂಕಗಳಂದು ಮೂಲ ದಾಖಲೆಗಳನ್ನು ಪರಿಶೀಲಿಸಿ ದಾಖಲಾತಿ ಪಡೆಯಲು ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ  school education.kar.nic.in   ವೆಬ್ ಸೈಟ್ ಅಥವಾ ನೋಡಲ್ ಅಧಿಕಾರಿಗಳನ್ನು ಮೊಬೈಲ್ ಸಂಖ್ಯೆ 9535296956 ಅಥವಾ 9448876825 ಸಂಪರ್ಕಿಸಬಹುದು ಎಂದು ಬೆಳಗಾವಿಯ ಸರಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////

 

ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿಗಾಗಿ ಅರ್ಜಿ ಆಹ್ವಾನ

ಬೆಳಗಾವಿ, ನ.030 : 2021-22 ನೇ ಸಾಲಿನ ಬೆಳಗಾವಿ ಜಿಲ್ಲೆಯಲ್ಲಿರುವ ಸರ್ಕಾರಿ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳ (ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ) ತರಬೇತಿ ಕೇಂದ್ರಕ್ಕೆ 24 ತಿಂಗಳ ತರಬೇತಿಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ

ಅಭ್ಯರ್ಥಿಗಳು ಕಡ್ಡಾಯವಾಗಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸಾಗಿರಬೇಕು ಹಾಗೂ ಕನ್ನಡವನ್ನು ಒಂದು ಭಾಷೆಯಾಗಿ ತೆಗೆದುಕೊಂಡಿರಬೇಕು ಅಭ್ಯರ್ಥಿಯು ಭಾರತೀಯ ನಾಗರಿಕರಾಗಿದ್ದು, ಕರ್ನಾಟಕದಲ್ಲಿ ಕನಿಷ್ಠ 5 ವರ್ಷ ವಿದ್ಯಾಭ್ಯಾಸ ಮಾಡಿರಬೇಕು.

30 ಅರ್ಹ ಅಭ್ಯರ್ಥಿಗಳನ್ನು ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ ತರಬೇತಿಗೆ ಆಯ್ಕೆ ಮಾಡಿಕೊಳ್ಳಲಾಗುವುದು.

ನಿಗದಿತ ಅರ್ಜಿಗಳನ್ನು www.karhfw.gov.in ವೆಬ್ ಸೈಟ್ ನಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ(SIHFW) ಅರ್ಜಿಗಳನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ದ್ವಿ-ಪ್ರತಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಾಲಯ ಬೆಳಗಾವಿ ಇಲ್ಲಿಗೆ ಡಿಸೆಂಬರ್ 10 ಸಂಜೆ 5.30 ಗಂಟೆಯೊಳಗೆ ಸಲ್ಲಿಸಲು ತಿಳಿಸಲಾಗಿದೆ.

ಅರ್ಜಿ ಮತ್ತು ಇತರ ದಾಖಲೆಗಳನ್ನು ಒಳಗೊಂಡ ಲಕೋಟೆಯ ಮೇಲೆ “ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳ ಕಿರಿಯ (ಮಹಿಳಾ ಆರೋಗ್ಯ ಸಹಾಯಕಿಯರ) ತರಬೇತಿಗಾಗಿ ಅರ್ಜಿ” ಎಂದು ನಮೂದಿಸಬೇಕು.

ಹೆಚ್ಚಿನ ಮಾಹಿತಿಗಾಗಿ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕರು, ಬೆಂಗಳೂರು ದೂರವಾಣಿ ಸಂಖ್ಯೆ: 080-23206125/6 ಗೆ, ಇಮೇಲ್  [email protected] ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಾಲಯ ಬೆಳಗಾವಿ, ದೂರವಾಣಿ ಸಂಖ್ಯೆ 0831-2482740 ಗೆ ಸಂಪರ್ಕಿಸಬಹುದು ಎಂದು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///

 

ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

 

ಬೆಳಗಾವಿ, ನ.30 : 2021-22ನೇ ಸಾಲಿನ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ನಿಯಮಿತದಿಂದ ಸವಿತಾ ಸಮುದಾಯ ಹಾಗೂ ಉಪ ಜಾತಿಗಳಿಗೆ ಸಾಲ ಸೌಲಭ್ಯ ಒದಗಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ : ಈ ಯೋಜನೆಯಡಿ ಸವಿತಾ ಸಮಾಜ ಹಾಗೂ ಅದರ ಉಪಜಾತಿಗಳ ಕುಲಕಸುಬು/ಸಾಂಪ್ರದಾಯಿಕ ವೃತ್ತಿಗಳಾದ ಕ್ಷೌರಿಕ ವೃತ್ತಿ, ಬ್ಯೂಟಿಷಿಯನ್, ಡೋಲು, ವಾದ್ಯ ಮತ್ತು ಬ್ಯಾಂಡ್‍ಸೆಟ್ ಮುಂತಾದ ವೃತ್ತಿಗಳನ್ನು ಹಾಗೂ ಕೌಶಲ್ಯತೆ ಹೊಂದಿರುವ ವೃತ್ತಿಗಳನ್ನು ಕೈಗೊಳ್ಳಲು ಗರಿಷ್ಠ ರೂ. 2 ಲಕ್ಷಗಳವರೆಗೆ ಆರ್ಥಿಕ ನೆರವು , ಇದರಲ್ಲಿ ಗರಿಷ್ಠ ಶೇ .15 ರಷ್ಟು ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ .2 ರ ಬಡ್ಡಿದರಲ್ಲಿ ಸಾಲ ಸೌಲಭ್ಯ ನೀಡಲಾಗುವದು.

ಸ್ವಯಂ ಉದ್ಯೋಗ ಸಾಲ ಯೋಜನೆ : ಸ್ವಯಂ ಉದ್ಯೋಗಕ್ಕೆ ವ್ಯಾಪಾರ, ಕೈಗಾರಿಕೆ, ಸಾರಿಗೆ ಮತ್ತು ಸೇವಾವಲಯ, ಮುಂತಾದ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ ರೂ, 2 ಲಕ್ಷಗಳವರೆಗೆ ಆರ್ಥಿಕ ನೆರವು, ಇದರಲ್ಲಿ ಗರಿಷ್ಠ ಶೇ .15 ರಷ್ಟು ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ .4 ರ ಬಡ್ಡಿದರಲ್ಲಿ ಸಾಲ ಸೌಲಭ್ಯ ನೀಡಲಾಗುವದು.

ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ .98,000 ಮತ್ತು ಪಟ್ಟಣ ಪ್ರದೇಶದವರಿಗೆ ರೂ .1,20,000 ಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹ ಅರ್ಜಿದಾರರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ (ನಿ) ಬೆಳಗಾವಿಯ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///

 

ಸಾಲ ಸೌಲಭ್ಯಕ್ಕಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

 

ಬೆಳಗಾವಿ, ನ.30 :2021-22 ನೇ ಸಾಲಿನ ಕ್ರಿಯಾ ಯೋಜನೆಯನ್ವಯ ವಿವಿಧ ಸಾಲ ಸೌಲಭ್ಯಗಳನ್ನು ಪಡೆಯಲು ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸುವಿಧಾ ತಂತ್ರಾಂಶದ ಮೂಲಕ ಆನ್ ಲೈನ್ ಅರ್ಜಿ ಸ್ವೀಕೃತಿ:

ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಸೌಲಭ್ಯ ಪಡೆದ ಅಭ್ಯರ್ಥಿಗಳಿಗೆ 2021-22 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ಮುಂದುವರೆದ ಕಂತುಗಳಿಗೆ ಸುವಿಧಾ ತಂತ್ರಾಂಶದಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 10 ರ ಒಳಗಾಗಿ ಸಲ್ಲಿಸಬಹುದು.

ಅರ್ಜಿದಾರರು ಆಧಾರ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿದ್ದು, 18-55 ವರ್ಷಗಳ ಮೀತಿಯಲ್ಲಿದ್ದು, ಜಾತಿ ಆದಾಯ ಪ್ರಮಾಣ ನೀಡಬೇಕು.

ಈ ಕಚೇರಿಯ ವೆಬ್ ಸೈಟ್  https://suvidha.karnataka.gov.in  ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

ಈ ಯೋಜನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಸಲ್ಲಿಸಬೇಕಾಗಿರುವ ದಾಖಲೆಗಳ ಬಗ್ಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ನಿಗಮದ ವೆಬ್ ಸೈಟ್  https://dbcdc.karnataka.gov.in  ನಲ್ಲಿ ಮಾಹಿತಿ ಪಡೆಯಬಹುದು.

ಸ್ವಯಂ ಉದ್ಯೋಗ ಸಾಲ: ನೇರವಾಗಿ ಅರ್ಜಿ ಸ್ವೀಕೃತಿ:

ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಈ ಯೋಜನೆಯಡಿಯಲ್ಲಿ ಸೌಲಭ್ಯ ಪಡೆಯ ಬಯಸುವ ಹಿಂದುಳಿದ ವರ್ಗಗಳ ಅರ್ಜಿದಾರರು ನೇರವಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಹಾಗೂ ನಿಗಮದ ವೆಬ್ ಸೈಟ್ ನ್ನು ಸಂಪರ್ಕಿಸಿ ಅರ್ಜಿ ನಮೂನೆ ಪಡೆದು ಅಗತ್ಯ ದಾಖಲಾತಿಗಳನ್ನು ಭರ್ತಿ ಮಾಡಿ ಜಿಲ್ಲಾ ಕಚೇರಿಗಳಿಗೆ ನೇರವಾಗಿ ಸಲ್ಲಿಸಬೇಕು.

ಈ ಯೋಜನೆ ಸೌಲಭ್ಯ ಪಡೆಯಲು ಸ್ವಯಂ ಉದ್ಯೋಗಕ್ಕಾಗಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ ರೂ.ಲಕ್ಷಗಳ ವರೆಗೆ ಆರ್ಥಿಕ ನೆರವು ಇದರಲ್ಲಿ ಗರಿಷ್ಠ ಶೇ.15 ರಷ್ಟು ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ 4 ರ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯಲು ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗೆ ಸೇರಿರಬೇಕು.
ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.40 ಸಾವಿರ ಮತ್ತು ನಗರ ಪ್ರದೇಶದವರಿಗೆ ರೂ.55 ಒಳಗಿರಬೇಕು.
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತವರು ಹಾಗೂ ಅವರ ಕುಟುಂಬದವರು ಮತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಿಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಯನ್ನು ಪಡೆಯಲು ನಿಗಮದ ಜಿಲ್ಲಾ ಕಚೇರಿಯ ಸಹಾಯವಾಣಿ ಸಂಖ್ಯೆ 0831-2402163 ಗೆ ಸಂಪರ್ಕಿಸಬಹುದು ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////

 

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ: ಸಾಲ ಹಾಗೂ ಸಹಾಯಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಳಗಾವಿ, ನ.30 : 2021-22 ನೇ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅಲ್ಪಸಂಖ್ಯಾತ ವರ್ಗದ ಮುಸ್ಲಿಂ, ಜೈನ, ಕ್ರಿಶ್ಚಿಯನ್, ಬೌದ್ಧ, ಸಿಖ್ಖರು ಹಾಗೂ ಪಾರ್ಸಿ ಜನಾಂಗದವರ ಶೈಕ್ಷಣಿಕ ಮತ್ತು ಆರ್ಥಿಕಾಭಿವೃದ್ಧಿಗಾಗಿ ಸಾಲ ಹಾಗೂ ಸಹಾಯಧನ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಯೋಜನೆಗಳು:

ಶ್ರಮಶಕ್ತಿ ಯೋಜನೆ:
ಅಲ್ಪಸಂಖ್ಯಾತರ ಸಮುದಾಯದ ಸಾಂಪ್ರಾದಾಯಿಕ ಕುಶಲಕರ್ಮಿಗಳಿಗೆ ಮತ್ತು ಕುಲಕಸಬುದಾರರಿಗೆ ಅವರ ವೃತ್ತಿ ಕೌಶಲ್ಯವನ್ನು ಅಭಿವೃದ್ಧಿ ಪಡಿಸಿಕೊಳ್ಳಲು ಗರಿಷ್ಠ ರೂ.50,000 ವರೆಗೆ ಶೇ.4% ರಷ್ಟು ಬಡ್ಡಿ ದರದಲ್ಲಿ ಸಾಲಸೌಲಭ್ಯ ಇದರಲ್ಲಿ ನಿಗದಿತ ಅವಧಿಯೊಳಗೆ 3 ವರ್ಷಗಳ ಅವಧಿಯೊಳಗೆ ಸಾಲ ಮರುಪಾವತಿ ಮಾಡುವ ಅರ್ಜಿದಾರರಿಗೆ ಶೇ.50% ರ ಬ್ಯಾಂಕನಿಂದ ಸಹಾಯಧನ ನೀಡಲಾಗುವುದು.

ಕಿರು (ಮೈಕ್ರೋ) ಸಾಲ ಮತ್ತು ಸಹಾಯಧನ ಯೋಜನೆ:
ಅಲ್ಪಸಂಖ್ಯಾತರ ಮಹಿಳೆಯರು ನಡೆಸುತ್ತಿರುವ ಲಾಭದಾಯಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಮಹಿಳಾ ಸ್ವ-ಸಹಾಯಗಳ ಸಂಘಗಳಿಗೆ ಸಣ್ಣ ಪ್ರಮಾಣದ ವ್ಯಾಪಾರ ಹಾಗೂ ಇತರೆ ಚಟುವಟಿಕೆಗಳಿಗಾಗಿ ಪ್ರತಿ ಸದಸ್ಯರಿಗೆ ಶೇ.4% ರ ಬಡ್ಡಿ ದರದಲ್ಲಿ ರೂ.10,000 ಸಾಲ ಸೌಲಭ್ಯ ಇದರಲ್ಲಿ ಶೇ.50% ರಷ್ಟು ಸಹಾಯಧನ ನೀಡಲಾಗುವದು.

ಗಂಗಾ ಕಲ್ಯಾಣ ಯೋಜನೆ:
ಅಲ್ಪಸಂಖ್ಯಾತರರು ವೈಯಕ್ತಿಕ ಕೊಳವೆ ಬಾವಿ ಯೋಜನೆ ಸೌಲಭ್ಯ ಪಡೆಯಲು ಕನಿಷ್ಠ 1 ಎಕರೆ 20 ಗುಂಟೆಯಿಂದ ಗರಿಷ್ಠ 5 ಎಕರೆ ಖುಷ್ಕಿ ಜಮೀನು ಹೊಂದಿರುವ ಸಣ್ಣ ಮತ್ತು ಅತೀ ಸಣ್ಣ ಅಲ್ಪಸಂಖ್ಯಾತರ ರೈತರಿಗೆ ರೂ.250 ಲಕ್ಷಗಳ ಆರ್ಥಿಕ ನೆರವು (ಬಯಸಿದ್ದಲ್ಲಿ ರೂ.50,000 ಸಾಲ ಸೇರಿ) ಇದರಲ್ಲಿ ಕೊಳವೆ ಬಾವಿ ಕೊರೆಯುವಿಕೆ ಪಂಪ್/ ಮೋಟಾರ್ ಸರಬರಾಜು ಮತ್ತು ವಿದ್ಯುದೀಕರಣ ವೆಚ್ಚ ಸೇರಿರುತ್ತದೆ.

ಆಟೋ ರಿಕ್ಷಾ/ ಟ್ಯಾಕ್ಷಿ/ ಸರಕು ವಾಹನಗಳ ಖರೀದಿಗಾಗಿ ಸಹಾಯಧನ ಯೋಜನೆ:
ಆಟೋ ರಿಕ್ಷಾ/ ಟ್ಯಾಕ್ಷಿ/ ಸರಕು ವಾಹನಗಳ ಖರೀದಿಗಾಗಿ ರಾಷ್ಟ್ರೀಕೃತ ಬ್ಯಾಂಕ ಗಳಿಂದ ಪಡೆಯುವ ಸಾಲಕ್ಕೆ ನಿಗಮದಿಂದ ರೂ.75000 ಸಾವಿರಗಳ ಸಹಾಯಧನ ಸಾಲಭ್ಯ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಮೈಕ್ರೋ ವೈಯಕ್ತಿಕ (ಕೊವೀಡ್-19) ಸಾಲದ ಯೋಜನೆ:
ಮೈಕ್ರೋ ವೈಯಕ್ತಿಕ ಸಾಲದ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಈ ಯೋಜನೆಯಡಿ ನಿಗಮದಿಂದ ರೂ.8000 ಸಾಲ ಹಾಗೂ ರೂ.2000 ಸಹಾಯಧನ ಸೇರಿದಂತೆ ಒಟ್ಟು ರೂ.10,000 ಮೊತ್ತವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಮಾಡಲಗುವುದು ಎಂದು ತಿಳಿಸಲಾಗಿದೆ.

ಅರ್ಜಿಗಳನ್ನು ಸಲ್ಲಿಸಲು ವೆಬ್‍ಸೈಟ್ hಣಣಠಿs://ಞಜmಛಿoಟಿಟiಟಿe.ಞಚಿಡಿಟಿಚಿಣಚಿಞಚಿ.gov.iಟಿ/ ಆನ್‍ಲೈನ್ ಮೂಲಕ ಡಿಸೆಂಬರ್ 15 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಮೌಲಾನಾ ಆಝಾದ ಅಲ್ಪಸಂಖ್ಯಾತರ ಭವನ, ಕೆ.ಎಸ್.ಸಿ.ಎ ಕ್ರಿಕೇಟ್ ಕ್ರೀಡಾಂಗಣ ಎದುರಗಡೆ, ರಾಮತೀರ್ಥ ನಗರ, ಬೆಳಗಾವಿ-5900016 ಹಾಗೂ ದೂರವಾಣಿ ಸಂಖ್ಯೆ: 0831-2950794 ಗೆ ಸಂಪರ್ಕಿಸಬಹುದು ಎಂದು ಬೆಳಗಾವಿಯ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ಜಿಲ್ಲಾ ವ್ಯವ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ವಾಪಿಸಂ.07
ಅಇಖಿ/ಓಇಇಖಿ ನಲ್ಲಿ ಆಯ್ಕೆಯಾಗುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಬೆಳಗಾವಿ, ನ.30 (ಕರ್ನಾಟಕ ವಾರ್ತೆ): 2021-22 ನೇ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಇಖಿ/ಓಇಇಖಿ ನಲ್ಲಿ ಆಯ್ಕೆಯಾಗುವ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಜೈನ, ಕ್ರಿಶ್ಚಿಯನ್, ಬೌದ್ಧ, ಸಿಖ್ಖರು, ಪಾರ್ಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಅರಿವು ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್ 5 ಪ್ರಾರಂಭಿಕ ದಿನಾಂಕವಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಈ ಯೋಜನೆಯಲ್ಲಿ ಸಾಲ ಸೌಲಭ್ಯ ಪಡೆಯಲು ಆನ್‍ಲೈನ ://kdmconline.karnataka.gov.in   ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಮೌಲಾನಾ ಆಝಾದ ಅಲ್ಪಸಂಖ್ಯಾತರ ಭವನ, ಕೆ.ಎಸ್.ಸಿ.ಎ. ಕ್ರಿಕೇಟ್ ಕ್ರೀಡಾಂಗಣ ಎದುರುಗಡೆ, ರಾಮತೀರ್ಥ ನಗರ, ಬೆಳಗಾವಿ- 590016 ಅಥವಾ ದೂರವಾಣಿ ಸಂಖ್ಯೆ: 0831-2950794 ಬೆಳಗಾವಿ ಕಚೇರಿಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ಬೆಳಗಾವಿ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////