Belagavi News In Kannada | News Belgaum

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರ ಸಭೆ

ಗೋಕಾಕ : ಗೋಕಾಕ, ಅರಭಾವಿ ವಿಧಾನಸಭೆ ಮತಕ್ಷೇತ್ರದ ಗ್ರಾಮ ಪಂಚಾಯ್ತಿ ಚುನಾಯಿತ ಪ್ರತಿನಿಧಿಗಳು, ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಮ್ಮ ಹಿಲ್ ಗಾರ್ಡನ್ ಕಚೇರಿಯಲ್ಲಿ ಶನಿವಾರ ಸಭೆ ನಡೆಸಿದರು.

ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಅಭ್ಯರ್ಥಿಯ ಗೆಲುವಿನಿಂದ ಪಕ್ಷಕ್ಕೆ ಶಕ್ತಿ ಬರಲಿದೆ. ನಿಮ್ಮ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ ಎಂದು ಮುಖಂಡರಿಗೆ ತಿಳಿಸಿದರು.

ಚುನಾವಣಾ ವೀಕ್ಷಕರಾದ ಎನ್. ಎ.ಹ್ಯಾರಿಸ್,  ಬೆಳಗಾವಿ ಕಾಂಗ್ರೆಸ್ ಗ್ರಾಮೀಣ  ಜಿಲ್ಲಾಧ್ಯಕ್ಷ ವಿನಯ್ ನಾವಲಗಟ್ಟಿ, ಕಲ್ಪನಾ ಜೋಶಿ  ಹಾಗೂ ಗೋಕಾಕ, ಅರಭಾವಿ ಮತಕ್ಷೇತ್ರ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

ಬಳಿಕ ಮಾಧ್ಯಮದವರೊಂದಿಗೆ ಸತೀಶ್ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರು ಚುನಾವಣೆ ವೀಕ್ಷಕರರನ್ನಾಗಿ ಶಾಸಕ ಎನ್.ಎ.ಹ್ಯಾರಿಸ್ ಅವರನ್ನು ನೇಮಕ ಮಾಡಿದ್ದಾರೆ. ಈ ಹಿನ್ನಲೆ  ಅವರು ಪ್ರವಾಸ ಮಾಡಿ, ಶಾಸಕರು, ಮಾಜಿ ಶಾಸಕರು, ಮುಖಂಡರನ್ನು ಭೇಟಿ ಮಾಡಿ, ಚರ್ಚಿಸಿದ್ದಾರೆ ಎಂದರು.

ಸ್ಥಿತಿಗತಿ ಬಗ್ಗೆ ಅಧ್ಯಕ್ಷರಿಗೆ ವರದಿ ಮಾಡುವುದು ವಾಡಿಕೆ. ಅದೇ ರೀತಿ ಇಂದು ಹ್ಯಾರಿಸ್ ಅವರು ಮುಖಂಡರ ಜತೆಗೆ ಚರ್ಚಿಸಿದ್ದಾರೆ, ಇಲ್ಲಿನ ಸ್ಥಿತಿಗತಿ  ಬಗ್ಗೆ ತಿಳಿಸುವ ಪ್ರಯತ್ನ ಮಾಡಿದ್ದೇವೆ. ವಿಧಾನಪರಿಷತ್ ಚುನಾವಣೆಯ ಮೊದಲ ದಿನದಿಂದಲೂ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲಾಗುತ್ತಿದೆ. ಈಗಾಗಲೇ ಹೇಳಿದಂತೆ ಕಾಂಗ್ರೆಸ್ ಅಭ್ಯರ್ಥಿ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.////