Belagavi News In Kannada | News Belgaum

ಮಹಿಳೆ ಎದುರೇ ಕ್ಯಾಬ್ ಚಾಲಕ ಹಸ್ತಮೈಥುನ : ಓಲಾ ಕಂಪನಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ

ಬೆಂಗಳೂರು:  ಓಲಾ ಕ್ಯಾಬ್‌ ಚಾಲಕನೊಬ್ಬ ಮಹಿಳಾ ಪ್ರಯಾಣಿಕರೊಬ್ಬರ ಎದುರು ಹಸ್ತಮೈಥುನ ಮಾಡಿಕೊಂಡು ಕೆಟ್ಟದಾಗಿ ವರ್ತಿಸಿರುವ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು  ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಕ್ಷಮೆಯಾಚಿಸಿದ್ದಾರೆ.
ಈ ಸಂಬಂಧ ಸಂತ್ರಸ್ತೆ ಟ್ವೀಟ್‌ನಲ್ಲಿ ಘಟನೆಯನ್ನು ವಿವರಿಸಿದ್ದಾರೆ. ಕೆಲಸ ಮುಗಿಸಿ ರಾತ್ರಿ ಮನೆಗೆ ತೆರಳು ಓಲಾ ಕ್ಯಾಬ್‌ ಬುಕ್‌ ಮಾಡಿದ್ದೆ. ಕ್ಯಾಬ್‌ನಲ್ಲಿ ಹೋಗುವಾಗ ಚಾಲಕ ಹಸ್ತಮೈಥುನ ಮಾಡಿಕೊಳ್ಳಲು ಶುರು ಮಾಡಿದ. ನಾನು ಇದನ್ನು ಗಮನಿಸಿದೆ.  ಆದರೆ ಆತ  ಏನು ನಡದೇ ಇಲ್ಲ ಎನ್ನುವಂತೆ ವರ್ತಿಸುತ್ತಿದ್ದ. ಈ ವೇಳೆ ನಾನು ಕೊಂಚ ಧೈರ್ಯ ಮಾಡಿ ಕಿರುಚಾಡಿದ್ದರಿಂದ ಕ್ಯಾಬ್‌ ನಿಲ್ಲಿಸಿದ. ಬಳಿಕ ನಾನು ಕೆಳಗೆ ಇಳಿದುಕೊಂಡು ಮತ್ತೊಂದು ಕ್ಯಾಬ್‌ನಲ್ಲಿ ಮನೆಗೆ ತೆರಳಿದೆ ಎಂದು ಟ್ಟಿಟರ್‌ನಲ್ಲಿ ಬರೆದುಕೊಂಡಿದ್ದಾರೆ.
ಈ ಘಟನೆ ಸಂಬಂಧ ಓಲಾ ಕಂಪನಿಗೆ ದೂರು ನೀಡಿದ ನಂತರ ಚಾಲಕನನ್ನು ಕೆಲಸದಿಂದ ತೆಗೆದಿದೆ ಎಂದು ಅವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.
ಘಟನೆ ಸಂಬಂಧ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ಈ ಘಟನೆ ಬಗ್ಗೆ ಕ್ಷಮೆ ಇರಲಿ. ನಿಮ್ಮ ದೂರನ್ನು ಗಂಭೀರವಾಗಿ ಪರಿಗಣಿಸಿದ್ದು, ದುರ್ವತನೆಯ ವ್ಯಕ್ತಿಯ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಪೊಲೀಸರು ತಮ್ಮನ್ನು ಸಂಪರ್ಕಿಸಲಿದ್ದಾರೆ. ಓಲಾ ಕಂಪನಿ ವಿರುದ್ಧವೂ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.//////