Belagavi News In Kannada | News Belgaum

ಹಿರಿಯ ಕಲಾವಿದ ಶಿವರಾಂ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತೀವ್ರ ಸಂತಾಪ

ಬೆಳಗಾವಿ : ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶಿವರಾಂ ಅವರ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಶಿವರಾಂ ಅವರ ಕೊಡುಗೆ ಅನನ್ಯ. ಆರು ದಶಕಗಳ ಸುದೀರ್ಘ ವೃತ್ತಿ ಜೀವನದಲ್ಲಿ ಸಹಾಯಕ ನಿರ್ದೇಶಕರಾಗಿ, ನಿರ್ಮಾಪಕರಾಗಿ, ನಟರಾಗಿ ಕಾರ್ಯನಿರ್ವಹಿಸಿದ್ದಾರೆ. ಪುಟ್ಟಣ್ಣ ಕಣಗಾಲ್ ನಿರ್ದೇಶನದ ಶರಪಂಜರ, ಶುಭ ಮಂಗಳ, ನಾಗರಹಾವು ಸೇರಿದಂತೆ ಹಲವಾರು ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದ್ದರು.

ಮೇರು ನಟನನ್ನು ಕಳೆದುಕೊಂಡಿರುವುದು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಪಾರ ಅಭಿಮಾನಿಗಳು ಹಾಗೂ ಕುಟುಂಬ ವರ್ಗದವರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ./////