Belagavi News In Kannada | News Belgaum

ದೇಶದಲ್ಲಿ ನಾಗರಿಕರು, ಭದ್ರತಾ ಸಿಬ್ಬಂದಿಗಳು ಸುರಕ್ಷಿತವಾಗಿಲ್ಲಿ: ರಾಹುಲ್ ಗಾಂಧಿ ಟ್ವೀಟ್ ಮೂಲಕ ಆಕ್ರೋಶ

ನವದೆಹಲಿ: ನಾಗಾಲ್ಯಾಂಡ್‌ನ ಮೋನ್ ಜಿಲ್ಲೆಯಲ್ಲಿ ಬಂಡುಕೋರರ ವಿರೋಧಿ ಕಾರ್ಯಾಚರಣೆಯಲ್ಲಿ ನಡೆದ ನಾಗರಿಕರ ಹತ್ಯೆಯ ಕುರಿತಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಕೇಂದ್ರ ಸರಕಾರದ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.
ಇದು ಹೃದಯ ವಿದ್ರಾವಕವಾಗಿದೆ. ನಮ್ಮ ದೇಶದಲ್ಲಿ ನಾಗರಿಕರಾಗಲಿ ಅಥವಾ ಭದ್ರತಾ ಸಿಬ್ಬಂದಿಗಳಾಗಲಿ ಸುರಕ್ಷಿತವಾಗಿಲ್ಲ.ಗೃಹ ಸಚಿವಾಲಯ ಏನು ಮಾಡುತ್ತಿದೆ ಎಂಬುದಕ್ಕೆ ಸರ್ಕಾರ “ನಿಜವಾದ ಉತ್ತರ” ನೀಡಬೇಕು’ ಎಂದು ಟ್ವೀಟ್ ಮಾಡಿದ್ದಾರೆ.////