Belagavi News In Kannada | News Belgaum

ವೀಕೆಂಡ್ ಕರ್ಫ್ಯೂ ಇಲ್ಲ: ಸಿಎಂ ಬಸವರಾಜ ಬೊಮ್ಮಾಯಿ ವಾರದ ಬಳಿಕ ಕ್ರಿಸ್‌ಮಸ್, ಹೊಸ ವರ್ಷಾಚರಣೆ ಬಗ್ಗೆ ನಿರ್ಧಾರ

ಬೆಂಗಳೂರು: ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಬಗ್ಗೆ ನಿರ್ಧರಿಸಿಲ್ಲ. ಇನ್ನೊಂದು ವಾರದ ಬೆಳವಣಿಗೆ ಅವಲೋಕಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾರದ ಬಳಿಕ ಕ್ರಿಸ್‌ಮಸ್, ಹೊಸ ವರ್ಷಾಚರಣೆ ಬಗ್ಗೆ ನಿರ್ಧಾರ ಮಾಡಲಾಗುವುದು. ಗಡಿ ಭಾಗಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಮುಂದುವರಿಯುತ್ತೆ. ಮೂವರಿಗೆ ಕರೋನಾ ಪಾಸಿಟಿವ್ ಬಂದರೆ ಕ್ಲಸ್ಟರ್ ಮಾಡುತ್ತೇವೆ.  ಸದ್ಯಕ್ಕೆ ಹೊಸದಾಗಿ ಯಾವುದೇ ನಿರ್ಬಂಧ ವಿಧಿಸಿಲ್ಲ ಅಂತ ಸ್ಪಷ್ಟಪಡಿಸಿದರು.

 

ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ: ಸಚಿವ ಸಂಪುಟ ಸಭೆ ಬಳಿಕ ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥ ಡಾ. ಎಂ.ಕೆ. ಸುದರ್ಶನ್ ಎಚ್ಚರಿಕೆ ನೀಡಿದ್ದಾರೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿದ್ದರೆ ಕಷ್ಟ. ಮುಂದೆ ನೈಟ್ ಕರ್ಫ್ಯೂ ಹಾಗೂ ಲಾಕ್​ಡೌನ್ ಮಾಡಬಾರದು ಎಂದರೆ ಈಗಲೇ ಮುಂಜಾಗ್ರತಾ

ಕ್ರಮಕೈಗೊಳ್ಳಬೇಕು. ಸಮಾರಂಭಗಳು, ಜನ ಸೇರುವ ಕಾರ್ಯಕ್ರಮಗಳು, ಜಾತ್ರೆಗಳು, ಮದುವೆಗಳಿಗೆ ಜಸ ಸೇರುವುದಕ್ಕೆ ಬ್ರೇಕ್ ಹಾಕಬೇಕು. ಹೊಸ ವರ್ಷಾಚರಣೆಗೆ ಅವಕಾಶ ನೀಡಬಾರದು. ಪ್ರತಿಭಟನೆಗಳಿಗೆ ಅವಕಾಶ ಬೇಡ. ಚುನಾವಣಾ ಫಲಿತಾಂಶದ ಸಂಭ್ರಾಮಚರಣೆ ಬೇಡ. ಇದಕ್ಕೆ ಸಿಎಂ ಬಹುತೇಕ ಒಪ್ಪಿಗೆ ಸೂಚಿಸಿದ್ದಾರೆ ಅಂತ ಡಾ. ಎಂ.ಕೆ. ಸುದರ್ಶನ್ ತಿಳಿಸಿದ್ದಾರೆ.