Belagavi News In Kannada | News Belgaum

2023ರಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ: ಶಾಸಕ ರಮೇಶ ಜಾರಕಿಹೊಳಿ ಬಿಜೆಪಿ ಅಭ್ಯರ್ಥಿ ಗೆಲುವು ನಮ್ಮ ಮೊದಲ ಗುರಿ

ಗೋಕಾಕ: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಮೇಲೆ ರಾಜ್ಯದಲ್ಲಿಒಳ್ಳೆಯ ವಾತಾವರಣ ನಿರ್ಮಾಣವಾಗಿದ್ದು, 2023ರ ವಿಧಾನ ಸಭೆ ಚುನಾವಣೆಯಲ್ಲಿ 224 ಬಿಜೆಪಿ ಅಭ್ಯರ್ಥಿಗಳು ಆಯ್ಕೆಯಾಗಲಿದ್ದಾರೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

 

ಗೋಕಾಕ ನಗರ ಸಭೆ ಮತಗಟ್ಟೆ ಸಂಖ್ಯೆ  261 ರಲ್ಲಿ ಮತ ಚಲಾಯಿಸಿ ಮಾತನಾಡಿದ ಅವರು, ದೇಶದಲ್ಲಿ ಪಂಜಾಬ್ ಮತ್ತು ಕರ್ನಾಟಕದಲ್ಲಿಕಾಂಗ್ರೆಸ್ ಅಲೆ ಇತ್ತು, ಆದರೆ ಇವತ್ತು ಅದು ಕೂಡ ಮಾಯವಾಗಿದೆ ಎಂದರು.

 

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗುಪ್ತ ಮತದಾನ ಇದ್ದು, ಅದರ ಬಗ್ಗೆ ಬಹಿರಂಗ ಪಡಿಸಲು ಆಗುವುದಿಲ್ಲ.  ನಾನು ಬಿಜೆಪಿ ಪಕ್ಷದ ಶಾಸಕನಾಗಿದ್ದು, ನಮ್ಮ ಮೊದಲ ಗುರಿ  ಬಿಜೆಪಿ ಅಭ್ಯರ್ಥಿ ಗೆಲುವು ಆಗಿದ್ದು, ಎರಡನೇ ಗುರಿ ಕಾಂಗ್ರೆಸ್ ಅಭ್ಯರ್ಥಿ ಸೋಲಿಸುವುದು ಎಂದು ತಿಳಿಸಿದರು.

ಚುನಾವಣೆಗೆ ದುಡ್ಡು ಅಷ್ಟೇ ಮುಖ್ಯ ಅಲ್ಲ. ಶಾಸಕರು ಮಾಡುವ ಅಭಿವೃದ್ಧಿ ಕಾರ್ಯಗಳು ಮತದಾರರ ಮೇಲೆ ಪ್ರಭಾವ ಬೀರುತ್ತವೆ ಎಂದರು.