Belagavi News In Kannada | News Belgaum

ಒಂದು ಪ್ರಕರಣ ಬೆನ್ನು ಹತ್ತಿದ್ದ ಪೊಲೀಸರು ಇನ್ನೆರಡು ಅಪರಾಧ ಪ್ರಕರಣ ಪತ್ತೆ

ಬೆಂಗಳೂರು: ಜಿಕೆವಿಕೆ ಭದ್ರತಾ ಸಿಬ್ಬಂದಿ ದೀಪಕ್ ಕುಮಾರ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಒಂದು ಪ್ರಕರಣ ಬೆನ್ನು ಹತ್ತಿದ್ದ ಪೊಲೀಸರು ಇನ್ನೆರಡು ಅಪರಾಧ ಪ್ರಕರಣ ಪತ್ತೆ ಮಾಡಿದ್ದಾರೆ.

 

ನ.22ರಂದು ಸೆಕ್ಯೂರಿಟಿ ಗಾರ್ಡ್ ದೀಪಕ್ ನನ್ನು ಆತನ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ದೀಪಕ್ ಮಗಳ ವಿಚಾರಣೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.

 

ಮಗಳ ಮೇಲೆಯೇ ಸೆಕ್ಯೂರಿಟಿ ಗಾರ್ಡ್ ದೀಪಕ್ ಅತ್ಯಾಚಾರವೆಸಗಿದ್ದ ಎನ್ನಲಾಗಿದೆ. ತಂದೆಯ ನಿರಂತರ ಕಿರುಕುಳಕ್ಕೆ ಬೇಸತ್ತು ಸ್ನೇಹಿತನ ಜೊತೆಗೂಡಿ ಹತ್ಯೆ ಮಾಡಿದ್ದಾಗಿ ಬಾಯ್ಬಿಟ್ಟಿದ್ದಾಳೆ. ಇದೀಗ ಮೃತ ದೀಪಕ್ ಕುಮಾರ್ ಸಿಂಗ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.

 

ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಕ್ ಮಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವೈದ್ಯಕೀಯ ತಪಾಸಣೆ ನಡೆಸಿದ್ದು, ವರದಿಯಲ್ಲಿ ಇನ್ನೊಂದು ಶಾಕಿಂಗ್ ಮಾಹಿತಿ ಬಯಲಾಗಿದೆ. 17 ವರ್ಷದ ಅಪ್ರಾಪ್ತ ಬಾಲಕಿಯಾಗಿರುವ ಮೃತ ದೀಪಕ್ ಮಗಳು ಗರ್ಭಿಣಿಯಾಗಿದ್ದು, ಆಕೆಯನ್ನು ಇನ್ನಷ್ಟು ವಿಚಾರಣೆಗೊಳಪಡಿಸಲಾಗಿದೆ. ಕೊಲೆ ಪ್ರಕರಣ ಸಂಬಂಧ ಬಾಲಕಿಯ ಸ್ನೇಹಿತನನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.