Belagavi News In Kannada | News Belgaum

ಪೊಲೀಸರಿಗಾಗಿ ಬೆಳಗಾವಿಯ ಸುವರ್ಣಸೌಧದ ಬಳಿ ನಿರ್ಮಿಸಿರುವ ಜರ್ಮನ್ ಟೆಂಟ್‍ಗೆ ಡಿಸಿಪಿ ಡಾ.ವಿಕ್ರಮ್ ಆಮ್ಟೆ ಭೇಟಿ

13  ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ಆರಂಭವಾಗುತ್ತಿದ್ದು. ಅಧಿವೇಶನ ಸುಗಮವಾಗಿ ನಡೆಯಲು ಎಲ್ಲ ರೀತಿಯ ಬಂದೋಬಸ್ತ್ ಮಾಡಿಕೊಂಡಿದ್ದೇವೆ ಎಂದರು ಡಿಸಿಪಿ ಡಾ.ವಿಕ್ರಮ್ ಆಮ್ಟೆ ಅವರು ತಿಳಿಸಿದ್ದಾರೆ.

ಅಧಿವೇಶನ ಭದ್ರತೆಗೆ ಆಗಮಿಸುವ ಪೊಲೀಸರಿಗಾಗಿ ಬೆಳಗಾವಿಯ ಸುವರ್ಣಸೌಧದ ಬಳಿ ನಿರ್ಮಿಸಿರುವ ಜರ್ಮನ್ ಟೆಂಟ್‍ಗೆ ಶನಿವಾರ ಡಿಸಿಪಿ ಡಾ.ವಿಕ್ರಮ್ ಆಮ್ಟೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸುವ ಪೊಲೀಸರ ಆರೋಗ್ಯದ ಹಿತವನ್ನು ಗಮನದಲ್ಲಿ ಇಟ್ಟುಕೊಂಡು ಎಲ್ಲ ರೀತಿಯ ವ್ಯವಸ್ಥೆ ಮಾಡುತ್ತಿದ್ದೇವೆ.