Belagavi News In Kannada | News Belgaum

ನಾಳೆ ಬೆಳಗಾವಿಯಲ್ಲಿ ಮಾಜಿ ಶಾಸಕ ಕೋನರೆಡ್ಡಿ ಕಾಂಗ್ರೆಸ್ ಸೇರ್ಪಡೆ

ಧಾರವಾಡ: ಈಗಾಗಲೇ ಅನೇಕ ಜೆಡಿಎಸ್ ಮುಖಂಡರು ಪಕ್ಷ ತೊರೆದು, ಬಿಜೆಪಿ, ಕಾಂಗ್ರೆಸ್ ಸೇರಿದ್ದಾರೆ. ಇದೀಗ ಜೆಡಿಎಸ್ ನ ಮಾಜಿ ಶಾಸಕ ಎನ್. ಹೆಚ್. ಕೋನರೆಡ್ಡಿ ಜೆಡಿಎಸ್ ಗೆ ಗುಡ್ ಬೈ ಹೇಳಿ, ನಾಳೆ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಿದ್ದಾರೆ.

ಧಾರವಾಡ ಜಿಲ್ಲೆಯ ನವಲಗುಂದ ಕ್ಷೇತ್ರದ ಮಾಜಿ ಶಾಸಕ ಎನ್. ಹೆಚ್. ಕೋನರೆಡ್ಡಿಯವರು ಜೆಡಿಎಸ್ ತೊರೆಯಲಿದ್ದಾರೆ ಎಂಬುದಾಗಿ ಹೇಳಲಾಗುತ್ತಿತ್ತು. ಇದೀಗ ಆ ಮಾಹಿತಿ ಖಚಿತಗೊಂಡಿದ್ದು, ನಾಳೆ ಬೆಳಗಾವಿ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಪ್ರಮುಖ ನಾಯಕರ ಸಮ್ಮುಖದಲ್ಲಿ ತೆನೆ ಬಿಟ್ಟು, ಕೈ ಹಿಡಿಯಲಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿರುವಂತ ಅವರು, ಕ್ಷೇತ್ರದ ಜನರಿಂದ ನಾನು ಕಾಂಗ್ರೆಸ್ ಸೇರುವ ಬಗ್ಗೆ ಒಕ್ಕೊರಲ ಒಮ್ಮತವಿದೆ. ಕ್ಷೇತ್ರದ ಜನತೆಯಂತೆ ನಾಳೆ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿರುವುದಾಗಿ ತಿಳಿಸಿದ್ದಾರೆ./////