Belagavi News In Kannada | News Belgaum

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪರಿಶ್ರಮವೇ ಗೆಲುವಿಗೆ ಕಾರಣ : ಚನ್ನರಾಜ್ ಹಟ್ಟಿಹೊಳಿ

ಚಿಕ್ಕೋಡಿ : ಕಾಂಗ್ರೆಸ್ ಪಕ್ಷದ ಗೆಲುವಿನ ಶ್ರೇಯಸ್ಸು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಯವರಿಗೆ ಸಲ್ಲಬೇಕು. ಅವರ ನಿರಂತರ ಪರಿಶ್ರಮದಿಂದ ಭರ್ಜರಿ ಗೆಲುವು ಸಾಧಿಸಿಲು ಸಾಧ್ಯವಾಗಿದೆ ಎಂದು  ಚನ್ನರಾಜ್ ಹಟ್ಟಿಹೊಳಿ ಹೇಳಿದ್ದಾರೆ.

ಫಲಿತಾಂಶದ ಬಳಿಕ ಮಾಧ್ಯಮದೊಂದಿಗೆ ಅವರು ಮಾತನಾಡಿ, ಸತೀಶ್ ಜಾರಕಿಹೊಳಿ ಅವರು ಪಕ್ಷ ನಿಷ್ಠೆಯಿಂದ ಕೆಲಸ ಮಾಡಿದ್ದಾರೆ. ಅವರ ವಿಶ್ವಾಸವೇ ನಮ್ಮ ವಿಶ್ವಾಸವಾಗಿತ್ತು. ಆದ್ದರಿಂದಲೇ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂಬ ನಂಬಿಕೆ ಇತ್ತು ಎಂದಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಬದಲಾವಣೆ ಗಾಳಿ ಬಿಸಿದೆ, ಜನರು ಸಹ ಬದಲಾವಣೆ ಬಯಸಿದ್ದಾರೆ. ಆದ ಕಾರಣ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದಾರೆ.  ಪಕ್ಷದ ಪ್ರತಿಯೊಬ್ಬರು ಸಾಮಾನ್ಯ ಕಾರ್ಯಕರ್ತರಾಗಿ ಕೆಲಸ ಮಾಡಿದ್ದಾರೆ. ಇದರಿಂದಲೇ ನಾನು ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮ್ಯ, ಕೆಪಿಸಿಸಿ ಅಧ್ಯಕ್ಷ ಡಿ,ಕೆ.ಶಿವಕುಮಾರ್. ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ಅವರ ಮೇಲೆ ವಿಶ್ವಾಸವಿಟ್ಟು ಮತದಾರರು ಆಶೀರ್ವಾದ ಮಾಡಿದ್ದಾರೆ. ಅವರ ನಂಬಿಕೆ, ವಿಶ್ವಾಸವನ್ನು ಉಳಿಸಿಕೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ಕಾರ್ಯ ನಿನ್ನದಾಗಲಿ, ಯಶಸ್ಸು ದೇವರಿಗೆ ಬಿಟ್ಟಿದ್ದು ಅಂತಾ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಯಾವಾಗಲೂ ಹೇಳುತ್ತಿದ್ದರು. ಅವರ ಮಾರ್ಗದಲ್ಲಿಯೇ ನಾನು ನಡಿದೆ. ಶಾಸಕಿ ಅವರು ನನಗೆ ರೋಡ್ ಮಾಡೆಲ್, ನನಗೆ ದೇವರು ಇದ್ದಂತೆ ಎಂದು ಹೇಳಿದ್ದಾರೆ./////