Belagavi News In Kannada | News Belgaum

ಚನ್ನರಾಜ್ ಗೆಲುವು : ಕೈ ಕಾರ್ಯಕರ್ತರಿಂದ ಸಂಭ್ರಮ

ಬೆಳಗಾವಿ :  ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಗೆಲುವು ಸಾಧಿಸಿದ ಹಿನ್ನೆಲೆ ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಕೈ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.

ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸಿದ ಕೆಪಿಸಿಸಿ  ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಾಗೂ ಪಕ್ಷದ ಪರ ಕೈ ಕಾರ್ಯಕರ್ತರು ಘೋಷಣೆ ಕೂಗಿ, ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಮಾಜಿ ಜಿಪಂ. ಸದಸ್ಯ ಅರುಣ ಕಟಾಂಬಳೆ ಸೇರಿದಂತೆ ಮುಖಂಡರು, ಕಾರ್ಯಕರ್ತರು ಇದ್ದರು./////